72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ತುಳು ಭಾಷೆಯ ಇಂಬು ಚಿತ್ರಕ್ಕೆ ಅತ್ಯುತ್ತಮ ತುಳು ಚಲನಚಿತ್ರ ಪ್ರಶಸ್ತಿ ಲಭಿಸಿದೆ. ಇಂದು ಗುಜರಾತಿನಲ್ಲಿ ನಡೆದ ರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗಿದೆ.


‘ಇಂಬು’ ಚಿತ್ರದ ನಿರ್ದೇಶನಕ್ಕೆ ಪ್ರಶಸ್ತಿಯು ಸಂದಿದೆ. ಶಿವದ್ವಜ್ ಶೆಟ್ಟಿ ಅವರು ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಇಂದು(ಸೆ. 22) ಗುಜರಾತ್ ನಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿಗಳಿಂದ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ.
ಗ್ರಾಮೀಣ ಹಿನ್ನೆಲೆ, ನಂಬಿಕೆ ಹಾಗೂ ಆಧುನಿಕತೆಯ ನಡುವಿನ ಸಂಘರ್ಷವನ್ನು ಈ ಸಿನಿಮಾ ಬಿಂಬಿಸುತ್ತದೆ. ನವೀನ್ ಡಿ. ಪಡೀಲ್, ತಮ್ಮ ಲಕ್ಷ್ಮಣ್ ಮುಂತಾದವರು. ತುಳು ಚಲನಚಿತ್ರ ರಂಗಕ್ಕೆ ಇದು 8ನೇ ರಾಷ್ಟ್ರೀಯ ಪ್ರಶಸ್ತಿಯಾಗಿದೆ.