Home Breaking Entertainment News Kannada Rakhi Sawant Arrest : ಡ್ರಾಮ ಕ್ವೀನ್ ರಾಖಿ ಸಾವಂತ್ ಅರೆಸ್ಟ್

Rakhi Sawant Arrest : ಡ್ರಾಮ ಕ್ವೀನ್ ರಾಖಿ ಸಾವಂತ್ ಅರೆಸ್ಟ್

Hindu neighbor gifts plot of land

Hindu neighbour gifts land to Muslim journalist

ಇತ್ತೀಚಿನ ದಿನಗಳಲ್ಲಿ ಒಂದಲ್ಲ ಒಂದು ವಿಚಾರಕ್ಕೆ ರಾಖಿ ಸಾವಂತ್ ಸುದ್ದಿಯಲ್ಲಿದ್ದು ಹೆಚ್ಚಿನವರ ಚರ್ಚಾ ವಿಷಯವಾಗಿ ಮಾರ್ಪಟ್ಟಿದ್ದಾರೆ. ಮದುವೆ ಗರ್ಭಪಾತದ ಸುದ್ದಿಗಳ ಬೆನ್ನಲ್ಲೇ, ರಾಖಿ ಸಾವಂತ್ ಅವರು ಪೊಲೀಸರ ಅತಿಥಿಯಾಗಿ ಸೆರೆಮನೆಯಲ್ಲಿದ್ದಾರೆ ಎಂಬ ಸುದ್ದಿಗಳು ಎಲ್ಲೆಡೆ ಹರಿದಾಡುತ್ತಿದ್ದವು. ಈ ಕುರಿತಾದ ಹೊಸ ವಿಚಾರವೊಂದು ಹೊರ ಬಿದ್ದಿದೆ.

ಕಳೆದ ಕೆಲವು ದಿನಗಳಿಂದ, ನಟಿ ರಾಖಿ ಸಾವಂತ್ ತಮ್ಮ ವೈಯಕ್ತಿಕ ಬದುಕಿನ ಕುರಿತಾಗಿ ಎಲ್ಲೆಡೆ ಸುದ್ದಿಯಲ್ಲಿದ್ದಾರೆ. ಬಿಗ್ ಬಾಸ್ ಮರಾಠಿಯಿಂದ ಹೊರಬಂದ ಬಳಿಕ ಕ್ಯಾನ್ಸರ್ ರೋಗಿಯಾದ ತನ್ನ ತಾಯಿಗೆ ಈಗ ಬ್ರೈನ್ ಟ್ಯೂಮರ್ ಬಂದಿದೆ ಎಂದು ನಟಿ ಹೇಳಿಕೊಂಡಿದ್ದರು. ಈ ಸುದ್ದಿಯ ಬಳಿಕ ಕೆಲ ದಿನಗಳ ಹಿಂದಷ್ಟೇ, ನಟಿಯ ಗೆಳೆಯ ಆದಿಲ್ ದುರಾನಿ ಜೊತೆಗಿನ ಮದುವೆಯ ಫೋಟೋಗಳು ವೈರಲ್ ಆಗಿ ಸಂಚಲನ ಸೃಷ್ಟಿಸಿತ್ತು. ಇದರ ಬೆನ್ನಲ್ಲೇ ಹೈ ಡ್ರಾಮಾ ಎಂಬಂತೆ ಆದಿಲ್ ಮದುವೆಯಾಗಲು ಒಪ್ಪಿಗೆ ಸೂಚಿಸಿಲ್ಲ ಎಂಬ ಮಾತುಗಳು ಕೇಳಿ ಬಂದವು . ಹೀಗೆ ಒಟ್ಟಿನಲ್ಲಿ ನಾನಾ ಕಾರಣಗಳ ಮೂಲಕ ರಾಖಿ ಸುದ್ದಿಯಲ್ಲಿದ್ದು , ನಟಿ ಶೆರ್ಲಿನ್ ಚೋಪ್ರಾ ಅವರ ದೂರಿನ ಮೇರೆಗೆ ಪೊಲೀಸರು ರಾಖಿಯನ್ನು ವಿಚಾರಣೆಗೆ ಕರೆದೊಯ್ದಿದ್ದಾರೆ ಎಂದು ತಿಳಿದುಬಂದಿದೆ.

ರಾಖಿ ಸಾವಂತ್ ವಿರುದ್ಧ ಎಫ್‌ಐಆರ್ ದಾಖಲಾಗಿರುವ ಹಿನ್ನೆಲೆ ಅಂಬೋಲಿ ಪೊಲೀಸರು ರಾಖಿ ಅವರನ್ನು ಬಂಧಿಸಿದ್ದಾರೆ ಎಂದು ಶೆರ್ಲಿನ್ ಚೋಪ್ರಾ ಈ ಟ್ವೀಟ್‌ನಲ್ಲಿ ಬರೆದುಕೊಂಡಿದ್ದಾರೆ. ರಾಖಿ ಸಾವಂತ್ ಅವರ ಕೋರಿಕೆಯನ್ನು ಮುಂಬೈ ಸೆಷನ್ಸ್ ಕೋರ್ಟ್ ನಿನ್ನೆ ತಿರಸ್ಕರಿಸಿರುವುದನ್ನು ಉಲ್ಲೇಖಿಸಿರುವ ಶೆರ್ಲಿನ್ ತಮ್ಮ ಟ್ವೀಟ್‌ನಲ್ಲಿ ಬರೆದುಕೊಂಡಿದ್ದಾರೆ ಎನ್ನಲಾಗಿದೆ.

ಮದುವೆ ಗರ್ಭಪಾತದ ಸುದ್ದಿಗಳ ನಡುವೆ, ರಾಖಿ ಸಾವಂತ್ ಅವರನ್ನು ಪೊಲೀಸರು ಬಂಧಿಸಿದ್ದಾರೆ ಎಂಬ- ಸುದ್ದಿಗಳು ಹರಿದಾಡುತ್ತಿದ್ದ ಬೆನ್ನಲ್ಲೇ ಸದ್ಯಕ್ಕೆ ರಾಖಿಯನ್ನು ಬಂಧಿಸಲಾಗಿಲ್ಲ ಎಂಬ ವಿಚಾರ ತಿಳಿದುಬಂದಿದೆ. ಆದರೆ ನಟಿ ಶೆರ್ಲಿನ್ ಚೋಪ್ರಾ ಅವರ ದೂರಿನ ಮೇರೆಗೆ ಪೊಲೀಸರು ರಾಖಿಯನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎನ್ನಲಾಗಿದೆ. ರಾಖಿ ತನ್ನ ಆಕ್ಷೇಪಾರ್ಹ ಫೋಟೋಗಳು ಮತ್ತು ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಬಿಡುಗಡೆ ಮಾಡಿದ್ದಾರೆ ಎಂದು ಶೆರ್ಲಿನ್ ಚೋಪ್ರಾ ರಾಖಿ ಸಾವಂತ್ ವಿರುದ್ಧ ದೂರು ದಾಖಲಿಸಿದ್ದು,ಈ ಕುರಿತಾಗಿ ರಾಖಿಯನ್ನು ವಿಚಾರಣೆಗೆ ಕರೆದಿದ್ದು, ಅಂಧೇರಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ ಎಂಬ ಮಾಹಿತಿ ತಿಳಿದು ಬಂದಿದೆ.