Home Entertainment Jio : ಪದೇ ಪದೇ ರೀಚಾರ್ಜ್‌ ಮಾಡೋ ಅಗತ್ಯವಿಲ್ಲ, ಜಿಯೋದ ಈ ಪ್ಲ್ಯಾನ್‌ ಹಾಕಿದರೆ ನಿಮಗೆ...

Jio : ಪದೇ ಪದೇ ರೀಚಾರ್ಜ್‌ ಮಾಡೋ ಅಗತ್ಯವಿಲ್ಲ, ಜಿಯೋದ ಈ ಪ್ಲ್ಯಾನ್‌ ಹಾಕಿದರೆ ನಿಮಗೆ ಕಿರಿಕಿರಿ ತಪ್ಪುತ್ತೆ

Hindu neighbor gifts plot of land

Hindu neighbour gifts land to Muslim journalist

ಟೆಲಿಕಾಮ್ ಕಂಪನಿಗಳಲ್ಲಿ ತನ್ನ ಮುನ್ನಡೆ ಕಾಯ್ದುಕೊಂಡು ದೇಶದ ನಂಬರ್‌ ಒನ್‌ ಸಂಸ್ಥೆಯಾಗಿರುವ ರಿಲಯನ್ಸ್‌ ಜಿಯೋ ಹೊಸ ಹೊಸ ಆಫರ್ ಮೂಲಕ ಗ್ರಾಹಕರ ಮನ ಸೆಳೆಯಲು ಸಿದ್ಧವಾಗುತ್ತಿದೆ. ಈ ನಡುವೆ ಏರ್ಟೆಲ್ ಕೂಡ ಜಿದ್ದಿಗೆ ಬಿದ್ದಂತೆ ತಾನು ಕೂಡ ಮುಂಚೂಣಿ ಸಾಧಿಸಲು ಹೊಸ ಆಫರ್ ನೀಡುತ್ತಿದೆ.

ಸದ್ಯ ಜಿಯೋ ಪ್ರೀಪೇಯ್ಡ್‌ ಪ್ಲ್ಯಾನ್‌ಗಳ ಜೊತೆಗೆ ಕೆಲವು ಆಕರ್ಷಕ ಪೋಸ್ಟ್‌ಪೇಯ್ಡ್‌ ಪ್ಲ್ಯಾನ್‌ಗಳನ್ನು ಪರಿಚಯಿಸಿದಷ್ಟೇ ಅಲ್ಲದೆ , ಭಿನ್ನ ಶ್ರೇಣಿಯ ಪೋಸ್ಟ್‌ಪೇಯ್ಡ್‌ ಪ್ಲ್ಯಾನ್‌ಗಳ ಆಫರ್ ಅನ್ನು ಕೂಡ ಗ್ರಾಹಕರಿಗೆ ನೀಡಿದೆ. ಇತ್ತಿಚಿನ ದಿನಗಳಲ್ಲಿ ಬಹಳಷ್ಟು ಪ್ರಸಿದ್ಧಿ ಪಡೆದಿರುವ 2ಜಿಬಿಯ ಡೇಟಾ ಪ್ಲಾನ್ ನೀಡಿ ಗ್ರಾಹಕರ ಮನ ಸೆಳೆಯುವಲ್ಲಿ ಯಶಸ್ವಿಯಾಗಿದೆ.

ಜಿಯೋ ಟೆಲಿಕಾಂನ ಪೋಸ್ಟ್‌ಪೇಯ್ಡ್‌ ಪ್ಲ್ಯಾನ್‌ವೊಂದು ಅಧಿಕ ಪ್ರಯೋಜನ ನೀಡುತ್ತದೆ.

ಜಿಯೋ 399ರೂ. ಪೋಸ್ಟ್‌ಪೇಯ್ಡ್ ಪ್ಲ್ಯಾನ್‌ ಪ್ರಯೋಜನ ಬಗ್ಗೆ ಗಮನ ಹರಿಸಿದರೆ,

ಜಿಯೋ 399ರೂ. ಪೋಸ್ಟ್‌ಪೇಯ್ಡ್ ಯೋಜನೆಯಲ್ಲಿ ಗ್ರಾಹಕರಿಗೆ 75 GB ಡೇಟಾದೊಂದಿಗೆ ಅನಿಯಮಿತ ಕರೆ ಮಾಡುವ ಸೌಲಭ್ಯದ ಜೊತೆಗೆ ಈ ಪೋಸ್ಟ್‌ಪೇಯ್ಡ್ ಪ್ಲ್ಯಾನಿನಲ್ಲಿ 200GB ಡೇಟಾ ರೋಲ್ ಓವರ್ ಆಯ್ಕೆ ಕೂಡ ಲಭ್ಯವಾಗಲಿದೆ. ಇದರ ಜೊತೆಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಪ್ರಯೋಜನ ಕೂಡ ದೊರೆಯಲಿವೆ .ಹಾಗೆಯೇ ಈ ಯೋಜನೆಯಲ್ಲಿ ಹೆಚ್ಚುವರಿಯಾಗಿ ನೆಟ್‌ಫ್ಲಿಕ್ಸ್‌, ಒಂದು ವರ್ಷದ ಅಮೆಜಾನ್ ಪ್ರೈಮ್ ವಿಡಿಯೋ ಚಂದಾದಾರಿಕೆ ಸಿಗಲಿದೆ. ಇದಲ್ಲದೆ, ಜಿಯೋ ಟಿವಿ, ಜಿಯೋ ಸಿನಿಮಾ, ಜಿಯೋ ಸಾವನ್ ಹಾಗೂ ಅನ್‌ಲಿಮಿಟೆಡ್‌ ಕಾಲರ್‌ ಟ್ಯೂನ್‌ ಸೌಲಭ್ಯಗಳು ಲಭ್ಯವಾಗಲಿವೆ.

ಜಿಯೋ 599ರೂ. ರಿಲಯನ್ಸ್‌ ಜಿಯೋ ಟೆಲಿಕಾಂನ ಜಿಯೋ 599ರೂ. ಪೋಸ್ಟ್‌ಪೇಯ್ಡ್‌ ಪ್ಲ್ಯಾನ್‌ ಉತ್ತಮ ಆಫರ್ ನೀಡಲಿದ್ದು, ಇದು ಬಜೆಟ್‌ ದರದ ಪೋಸ್ಟ್‌ಪೇಯ್ಡ್‌ ಯೋಜನೆ ಆಗಿದ್ದು, ಈ ಯೋಜನೆಯ ಮೂಲಕ ಅನಿಯಮಿತ ಡೇಟಾ ಪ್ರಯೋಜನ ಪಡೆಯಬಹುದು. ಇದರ ಜೊತೆಗೆ, ಉಚಿತ ಓಟಿಟಿ ಚಂದಾದಾರಿಕೆಯ ಸೌಲಭ್ಯ , ಡೇಟಾ ರೋಲ್‌ ಓವರ್‌ ಹಾಗೂ ಎಸ್‌ಎಮ್‌ಎಸ್‌ ಸೌಲಭ್ಯ ಕೂಡ ದೊರೆಯಲಿವೆ.

ಹಾಗಾದರೆ ಜಿಯೋದ 599ರೂ ಪೋಸ್ಟ್‌ಪೇಯ್ಡ್‌ ಪ್ಲ್ಯಾನಿನ ಪ್ರಯೋಜನವೇನು ಎಂದು ಗಮನಿಸಿದರೆ :

ಜಿಯೋ 599ರೂ. ಪೋಸ್ಟ್‌ಪೇಯ್ಡ್ ಯೋಜನೆಯಲ್ಲಿ ಗ್ರಾಹಕರಿಗೆ 100 GB ಡೇಟಾದೊಂದಿಗೆ ಅನಿಯಮಿತ ಕರೆ ಹಾಗೆಯೇ, ಪ್ರತಿದಿನ 100 ಎಸ್‌ಎಮ್‌ಎಸ್‌ ಕಳುಹಿಸುವ ಸೌಲಭ್ಯ ಜೊತೆಗೆ ಈ ಪ್ಲ್ಯಾನಿನಲ್ಲಿ 200GB ಡೇಟಾ ರೋಲ್ ಓವರ್ ಆಯ್ಕೆಯೂ ದೊರೆಯಲಿದೆ ಮತ್ತು ಹೆಚ್ಚುವರಿ ಒಂದು ಸಿಮ್ ಕನೆಕ್ಟಿವಿಟಿ ಸೌಲಭ್ಯ ಕೂಡ ದೊರೆಯಲಿವೆ. ನಿಗದಿತ ಉಚಿತ ಡೇಟಾ ಖಾಲಿ ಆದ ಬಳಿಕ ಪ್ರತಿ 1GB ಗೆ 10ರೂ, ಶುಲ್ಕ ವೆಚ್ಚ ತಗಲುತ್ತದೆ.

ಇದಷ್ಟೇ ಅಲ್ಲದೇ, ಈ ಯೋಜನೆಯಲ್ಲಿ ಹೆಚ್ಚುವರಿಯಾಗಿ ನೆಟ್‌ಫ್ಲಿಕ್ಸ್‌ ಚಂದಾದಾರಿಕೆ, ಒಂದು ವರ್ಷದ ಅಮೆಜಾನ್ ಪ್ರೈಮ್ ವಿಡಿಯೋ ಚಂದಾದಾರಿಕೆ ದೊರೆಯಲಿವೆ. ಹೆಚ್ಚುವರಿಯಾಗಿ, ಜಿಯೋ ಟಿವಿ, ಜಿಯೋ ಸಿನಿಮಾ, ಜಿಯೋ ಸಾವನ್ ಹಾಗೂ ಅನ್‌ಲಿಮಿಟೆಡ್‌ ಕಾಲರ್‌ ಟ್ಯೂನ್‌ ಸೌಲಭ್ಯಗಳು ಲಭ್ಯವಾಗಲಿವೆ.

ಜಿಯೋ 799ರೂ. ಪೋಸ್ಟ್‌ಪೇಯ್ಡ್ ಪ್ಲ್ಯಾನ್‌ ಪ್ರಯೋಜನಗಳು ಜಿಯೋ 799ರೂ. ಪೋಸ್ಟ್‌ಪೇಯ್ಡ್ ಯೋಜನೆಯಲ್ಲಿ ಗ್ರಾಹಕರಿಗೆ 150 GB ಡೇಟಾದೊಂದಿಗೆ ಅನಿಯಮಿತ ಕರೆ ಮಾಡುವ ಜೊತೆಗೆ ಗ್ರಾಹಕರಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಕಳುಹಿಸುವ ಅವಕಾಶ ದೊರೆಯಲಿದೆ.

ಹಾಗೆಯೇ ಈ ಪ್ಲ್ಯಾನಿನಲ್ಲಿ 200 GB ಡೇಟಾ ರೋಲ್ ಓವರ್ ಆಯ್ಕೆಯ ಜೊತೆಗೆ ಹೆಚ್ಚುವರಿ ಎರಡು ಸಿಮ್ ಕನೆಕ್ಟಿವಿಟಿ ಸೌಲಭ್ಯ ಕೂಡ ದೊರೆಯಲಿವೆ. ನಿಗದಿತ ಉಚಿತ ಡೇಟಾ ಖಾಲಿ ಆದ ಬಳಿಕ ಪ್ರತಿ 1GB ಗೆ 10ರೂ, ಶುಲ್ಕ ವೆಚ್ಚ ತಗಲುತ್ತದೆ. ಈ ಪೋಸ್ಟ್‌ಪೇಯ್ಡ್ ಯೋಜನೆಯಲ್ಲಿ ಹೆಚ್ಚುವರಿಯಾಗಿ ಗ್ರಾಹಕರಿಗೆ ನೆಟ್‌ಫ್ಲಿಕ್ಸ್‌ ಚಂದಾದಾರಿಕೆ, ಒಂದು ವರ್ಷದ ಅಮೆಜಾನ್ ಪ್ರೈಮ್ ವಿಡಿಯೋ ಚಂದಾದಾರಿಕೆ ದೊರೆಯಲಿದ್ದು, ಇದಲ್ಲದೆ, ಜಿಯೋ ಟಿವಿ, ಜಿಯೋ ಸಿನಿಮಾ, ಜಿಯೋ ಸಾವನ್ ಹಾಗೂ ಅನ್‌ಲಿಮಿಟೆಡ್‌ ಕಾಲರ್‌ ಟ್ಯೂನ್‌ ಸೌಲಭ್ಯಗಳು ಕೂಡ ಗ್ರಾಹಕರಿಗೆ ಸಿಗಲಿವೆ.