Home Entertainment Rishab Shetty: ನೀನು ನನ್ನ ಮನಸ್ಸಿನಲ್ಲಿ ಎಂದೆಂದಿಗೂ ಅದ್ಭುತ ಕಲಾವಿದ-ರಿಷಬ್‌ ಸಂತಾಪ

Rishab Shetty: ನೀನು ನನ್ನ ಮನಸ್ಸಿನಲ್ಲಿ ಎಂದೆಂದಿಗೂ ಅದ್ಭುತ ಕಲಾವಿದ-ರಿಷಬ್‌ ಸಂತಾಪ

Image Credit: Pinkvilla

Hindu neighbor gifts plot of land

Hindu neighbour gifts land to Muslim journalist

Rishab Shetty: ತನ್ನ ಹಾಸ್ಯ ಪಾತ್ರದ ಮೂಲಕ ರಂಜನೆ ಮಾಡುತ್ತಿದ್ದ ರಾಕೇಶ್‌ ಪೂಜಾರಿ ನಿನ್ನೆ ನಿಧನ ಹೊಂದಿದ್ದು, ಇನ್ನು ನಮ್ಮ ನಿಮ್ಮೆಲ್ಲರ ಮಧ್ಯೆ ನೆನಪು ಮಾತ್ರ.

ಹಲವು ಸಿನಿಮಾಗಳಲ್ಲಿ ನಟಿಸಿದ್ದ ರಾಕೇಶ್‌ ಕೊನೆಯದಾಗಿ ʼಕಾಂತಾರ-1′ ಸಿನಿಮಾದಲ್ಲಿ ನಟಿಸುತ್ತಿದ್ದರು. ಅವರ ನಿಧನಕ್ಕೆ ನಟ ರಿಷಬ್‌ ಶೆಟ್ಟಿ ಸಂತಾಪ ಸೂಚಿಸಿದ್ದು, ಭಾವುಕರಾಗಿ ಸೋಶಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಮಾಡಿದ್ದಾರೆ.

ನೀನು ನನ್ನ ಮನಸ್ಸಿನಲ್ಲಿ ಎಂದೆಂದಿಗೂ ಒಬ್ಬ ಅದ್ಭುತ ಕಲಾವಿದ. ಕಾಂತಾರ ಸಿನಿಮಾದಲ್ಲಿ ನಿನ್ನ ಪಾತ್ರ ಹಾಗು ಅದನ್ನು ನಿರ್ವಹಿಸುವಾಗ ನಿನ್ನ ಮುಖದ ನಗು ನನ್ನ ಕಣ್ಣಲ್ಲಿ ಎಂದೆಂದಿಗೂ ಶಾಶ್ವತ. ಕಲಾವಿದ ವರ್ಗಕ್ಕೆ ಇದೊಂದು ತುಂಬಲಾರದ ನಷ್ಟ .. ಮತ್ತೆ ಹುಟ್ಟಿ ಬಾ ಗೆಳೆಯ ..

ನಿನ್ನ ಆತ್ಮಕ್ಕೆ ಶಾಂತಿ ಸಿಗಲಿ. ದೇವರು ಈ ಆಘಾತವನ್ನು ಸಹಿಸುವ ಶಕ್ತಿ ನಿನ್ನ ಕುಟುಂಬಕ್ಕೆ ಕೊಡಲಿ ಎಂದು ಬರೆದಿದ್ದಾರೆ.