Home Entertainment Guruprasad: ನಟ, ನಿರ್ದೇಶಕ ಮಠ ಗುರುಪ್ರಸಾದ್‌ ಆತ್ಮಹತ್ಯೆ

Guruprasad: ನಟ, ನಿರ್ದೇಶಕ ಮಠ ಗುರುಪ್ರಸಾದ್‌ ಆತ್ಮಹತ್ಯೆ

Hindu neighbor gifts plot of land

Hindu neighbour gifts land to Muslim journalist

Guruprasad: ನಟ, ನಿರ್ದೇಶಕ ಮಠ ಗುರುಪ್ರಸಾದ್‌ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆಗೆ ಶರಣಾಗಿದ್ದಾರೆ ಗುರುಪ್ರಸಾದ್‌ ಅವರು.

ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಮಠ ಸಿನಿಮಾ ನಿರ್ದೇಶಕ ಗುರುಪ್ರಸಾದ್‌ (52) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮನೆಯಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಲಗಾರರ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಸಂಶಯವು ಹೆಚ್ಚಾಗಿದೆ. ಘಟನಾ ಸ್ಥಳಕ್ಕೆ ಮಾದನಾಯಕಹಳ್ಳಿ ಪೊಲೀಸರು ದೌಡಾಯಿಸಿದ್ದಾರೆ.

ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆಗೆ ಶರಣಾಗಿದ್ದಾರೆ ಗುರುಪ್ರಸಾದ್‌ ಅವರು. ಇತ್ತೀಚೆಗಷ್ಟೇ ಎರಡನೇ ಮದುವೆಯನ್ನು ಗುರುಪ್ರಸಾದ್‌ ಅವರು ಮಾಡಿಕೊಂಡಿದ್ದರು. ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವುದು ತನಿಖೆಯಿಂದ ತಿಳಿದು ಬರಬೇಕಿದೆ.

ಅಪಾರ್ಟ್‌ಮೆಂಟ್‌ನಿಂದ ವಾಸನೆ ಬರುತ್ತಿರುವುದನ್ನು ಅಕ್ಕಪಕ್ಕದವರು ಗಮನಿಸಿ ಬಾಗಿಲು ತೆಗೆದು ನೋಡಿದಾಗ, ಗುರುಪ್ರಸಾದ್‌ ಅವರು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಮೃತದೇಹ ಕೊಳೆತ ಸ್ಥಿತಿಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ. ಹಾಗಾದರೆ ಇವರು ಆತ್ಮಹತ್ಯೆ ಮಾಡಿಕೊಂಡಿರುವುದು ಯಾವಾಗ? ಎನ್ನುವುದು ಪೋಸ್ಟ್‌ಮಾರ್ಟಂ ಮೂಲಕ ತಿಳಿದು ಬರಲಿದೆ.

ಅಪಾರ್ಟ್‌ಮೆಂಟ್‌ನಲ್ಲಿ ಎಂಟು ತಿಂಗಳಿನಿಂದ ವಾಸವಾಗಿದ್ದರು ಗುರುಪ್ರಸಾದ್‌. ಒಬ್ಬರೇ ಇದ್ರಾ? ಹೆಂಡತಿ ಜೊತೆ ಇದ್ರಾ? ಎನ್ನುವುದು ಇನ್ನಷ್ಟೇ ತಿಳಿದು ಬರಬೇಕಿದೆ.

2006 ರಲ್ಲಿ ಸ್ಯಾಂಡಲ್‌ವುಡ್‌ಗೆ ಎಂಟ್ರಿ ನೀಡಿದ್ದ ಗುರುಪ್ರಸಾದ್‌ ಅವರು, ಮಠ ಸಿನಿಮಾ ಮೂಲಕ ಸ್ಯಾಂಡಲ್‌ವುಡ್‌ಗೆ ಬಂದಿದ್ದರು. ಮಾಡಿದ್ದರು. ಮಠ ಎದ್ದೇಳು ಮಂಜುನಾಥ, ಡೈರೆಕ್ಟರ್‌ ಸ್ಪೆಷಲ್‌, ರಂಗನಾಯಕ, ಎರಡನೇ ಸಲ ನಿಮಾಗಳನ್ನು ನಿರ್ದೇಶನ ಮಾಡಿದ್ದಾರೆ. ಒಟ್ಟು 10 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದರು ಗುರುಪ್ರಸಾದ್‌. ಹಾಗೆನೇ ರಿಯಾಲಿಟಿ ಶೋ ಆದ ಬಿಗ್‌ಬಾಸ್‌ ಸೀಸನ್‌ 2 ಸ್ಪರ್ಧಿಯಾಗಿದ್ದರು. ಗುರುಪ್ರಸಾದ್‌. ನಿರ್ದೇಶನ, ನಟನೆಯಲ್ಲಿ ಸೈ ಎನಿಸಿಕೊಂಡಿದ್ದರು.

ಗುರುಪ್ರಸಾದ್‌ ನಿರ್ದೇಶನದ ʼಎದ್ದೇಳು ಮಂಜುನಾಥʼ ಸಿನಿಮಾಗೆ ರಾಜ್ಯ ಚಲನಚಿತ್ರ ಪ್ರಶಸ್ತಿ ಬಂದಿತ್ತು. ಅತ್ಯುತ್ತಮ ಚಿತ್ರಕಥೆ ಎಂದು ರಾಜ್ಯ ಚಲನಚಿತ್ರ ಪ್ರಶಸ್ತಿ ಬಂದಿತ್ತು. ಅಡೆಮಾ ಸಿನಿಮಾ ಶೂಟಿಂಗ್‌ ನಡೆಯುತ್ತಿತ್ತು.