Home Breaking Entertainment News Kannada Mandeep Roy : ಸ್ಯಾಂಡಲ್ ವುಡ್ ಹಿರಿಯ ನಟ ಮನ್ ದೀಪ್ ರಾಯ್ ಆಸ್ಪತ್ರೆಗೆ ದಾಖಲು

Mandeep Roy : ಸ್ಯಾಂಡಲ್ ವುಡ್ ಹಿರಿಯ ನಟ ಮನ್ ದೀಪ್ ರಾಯ್ ಆಸ್ಪತ್ರೆಗೆ ದಾಖಲು

Hindu neighbor gifts plot of land

Hindu neighbour gifts land to Muslim journalist

ಕನ್ನಡ ಚಿತ್ರರಂಗದ ಹಿರಿಯ ನಟ ಮನ್ದೀಪ್ ರಾಯ್ (Mandeep Roy) ಅವರಿಗೆ ಹೃದಯಾಘಾತವಾಗಿದ್ದು, ಬೆಂಗಳೂರಿನ ಖಾಸಗಿ ಅಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ.

(Mandeep Roy )ಮನ್ದೀಪ್ ರಾಯ್ 500ಕ್ಕೂ ಅಧಿಕ ಸಿನಿಮಾಗಳಲ್ಲಿ ಅವರು ನಟಿಸಿ ಜನತೆಯನ್ನು ರಂಜಿಸಿದ್ದಾರೆ. ಈ ನಡುವೆ ಮೂರು ದಿನಗಳ ಹಿಂದೆ ಹಾರ್ಟ್​ ಅಟ್ಯಾಕ್​ (Heart Attack) ಆಗಿದ್ದು, ಅವರನ್ನು ಬೆಂಗಳೂರಿನ ಶೇಷಾದ್ರಿಪುರದಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಅವರ ಚಿಕಿತ್ಸೆಗೆ ಆರ್ಥಿಕ ನೆರವಿನ ಅವಶ್ಯಕತೆ ಎದುರಾಗಿದೆ ಎನ್ನಲಾಗುತ್ತಿದೆ.

ಪ್ರಸ್ತುತ ಅವರಿಗೆ ಚಿಕಿತ್ಸೆ ಮುಂದುವರಿಸಲಾಗುತ್ತಿದ್ದು, ಸದ್ಯ ಮನ್​ದೀಪ್ ಅವರ ಆರೋಗ್ಯ ಸ್ಥಿತಿಯ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ. ಆದರೆ, ಅವರ ಚಿಕಿತ್ಸೆಗೆ ಹಣಕಾಸಿನ ತೊಡಕು ಉಂಟಾಗಿದ್ದು, ಆರ್ಥಿಕ ನೆರವಿನ ಅಗತ್ಯವಿದೆ ಎಂದು ತಿಳಿದು ಬಂದಿದ್ದು, ಮನ್​ದೀಪ್​ ರಾಯ್​ ಅವರು ಆದಷ್ಟು ಬೇಗ ಗುಣಮುಖರಾಗಲಿ ಎಂದು ಎಲ್ಲ ಅಭಿಮಾನಿಗಳು ಆಶಿಸುತ್ತಿದ್ದಾರೆ.