Home Entertainment ಉಪೇಂದ್ರ ನಿರ್ದೇಶಿಸಿ, ನಟಿಸಲಿರುವ ಹೊಸ ಸಿನಿಮಾ ಬರ್ತಿದೆ. ಅದರ ಟೈಟಲ್ಲೇ ಡಿಫರೆಂಟಿದೆ ನೋಡಿ !

ಉಪೇಂದ್ರ ನಿರ್ದೇಶಿಸಿ, ನಟಿಸಲಿರುವ ಹೊಸ ಸಿನಿಮಾ ಬರ್ತಿದೆ. ಅದರ ಟೈಟಲ್ಲೇ ಡಿಫರೆಂಟಿದೆ ನೋಡಿ !

Hindu neighbor gifts plot of land

Hindu neighbour gifts land to Muslim journalist

ಕನ್ನಡ ಸಿನಿಮಾ ರಂಗಕ್ಕೆ ವಿಭಿನ್ನ ಶೈಲಿಯ ಸೂಪರ್ ಡ್ಯೂಪರ್ ಸೂಪರ್ ಹಿಟ್ ಚಿತ್ರಗಳನ್ನು ನೀಡಿರುವ ನಿರ್ದೇಶಕ ಉಪೇಂದ್ರ ‘ಉಪ್ಪಿ ೨’ ಚಿತ್ರದ ನಂತರ ಯಾವುದೇ ಚಿತ್ರ ನಿರ್ದೇಶನ ಮಾಡಿರಲಿಲ್ಲ. ಉಪೇಂದ್ರ ನಿರ್ದೇಶನದ ಚಿತ್ರಕ್ಕಾಗಿ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದರು.
ಆ ಮಜಾಗಳಿಗೆ ಈಗ ಬಂದಿದೆ.‌ ಉಪೇಂದ್ರ ನಿರ್ದೇಶಿಸಿ, ನಾಯಕರಾಗೂ ನಟಿಸುತ್ತಿರುವ ನೂತನ ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಬಂಡೆಮಹಾಕಾಳಿ ದೇವಸ್ಥಾನದಲ್ಲಿ ನಡೆಯಿತು. ಚಿತ್ರದ ಮೊದಲ ಸನ್ನಿವೇಶಕ್ಕೆ ಸುದೀಪ್ ಆರಂಭ ಫಲಕ ತೋರಿದರೆ, ಶಿವರಾಜಕುಮಾರ್ ಕ್ಯಾಮೆರಾ ಚಾಲನೆ ನೀಡಿದರು. ಈ ಸಮಾರಂಭಕ್ಕೆ ಗೀತಾ ಶಿವರಾಜಕುಮಾರ್, ಡಾಲಿ ಧನಂಜಯ, ವಸಿಷ್ಠ ಸಿಂಹ ಮುಖ್ಯ ಅತಿಥಿಗಳಾಗಿ ಆಗಮಿಸಿ ಶುಭ ಕೋರಿದರು.

ಹಿಂದಿನ ಚಿತ್ರಗಳಲ್ಲಿ ಒಂದಲ್ಲ ಒಂದು ವಿಭಿನ್ನ ಚಿತ್ರಕಥೆ ನಿರ್ದೇಶನ ಸಂಭಾಷಣೆ ಕಾಮಿಡಿ ಇತ್ಯಾದಿಗಳ ಜತೆಗೆ ವಿಭಿನ್ನ ಶೀರ್ಷೆಕೆಯನ್ನ ಇಟ್ಟು ಮನರಂಜನೆಯ ಜೊತೆಗೆ ಎಲ್ಲರ ತಲೆಗೆ ಕೆಲಸ ಕೊಡುತ್ತಿದ್ದ ಉಪೇಂದ್ರ ಅವರು ಈ ಚಿತ್ರದಲ್ಲೂ ಹಾಗೆಯೇ ಮಾಡಿದ್ದಾರೆ. ಶ್, ಓಂ, ಸೂಪರ್ ನಂತರ ಈಗ 3 ನಾಮದ ಜತೆ ಉಪ್ಪಿ ಪ್ರತ್ಯಕ್ಷ. ಮೂರುನಾಮದ ಚಿಹ್ನೆಯೊಂದು ಈ ಚಿತ್ರದ ಶೀರ್ಷಿಕೆಯಾಗಿದೆ. ಇದನ್ನು ಕೆಲವರು ಮೂರು ನಾಮ ಅಂದುಕೊಂಡರೆ, ಮತ್ತೆ ಕೆಲವರು ಯು ಮತ್ತು ಐ ಅಂದುಕೊಳ್ಳುತ್ತಾರೆ. ನಾನು ಮತ್ತು ನೀನು ಎಂಬ ಅರ್ಥ ಬರುವ ಹಾಗಿದೆ ಆ ಚಿಹ್ನೆ ಎಂಬ ವಿಶ್ಲೇಷಣೆ ಸಾಗಿದೆ.

ಈ ಕುರಿತು ಮಾತನಾಡಿದ ಉಪೇಂದ್ರ, “ಇಂದಿನಿಂದ ಚಿತ್ರೀಕರಣ ಆರಂಭಿಸಿದ್ದೇವೆ. ಲಹರಿ ಸಂಸ್ಥೆಯವರು ಹಾಗೂ ಕೆ.ಪಿ.ಶ್ರೀಕಾಂತ್ ನಿರ್ಮಾಣ ಮಾಡುತ್ತಿದ್ದಾರೆ. ವಿಭಿನ್ನ ಶೀರ್ಷಿಕೆ ಯಿಟ್ಟಿದ್ದೀನಿ. ನಿಮಗೆಲ್ಲಾ ಏನು ಅನಿಸುತ್ತದಯೋ, ಅದೇ ಶೀರ್ಷಿಕೆ ಆಗಿರುತ್ತದೆ. ನಾನು ಕಥೆ ಸಿದ್ದಮಾಡಿಕೊಂಡಿರುತ್ತೇನೆ. ಮತ್ತೆ ಬೇರೆ ಅಲೋಚನೆ ಬಂದರೆ, ಬದಲಿಸುತ್ತೀನಿ. ಚಿತ್ರದ ಶೀರ್ಷಿಕೆ ಹಾಗೂ ಕುದುರೆ ಪೋಸ್ಟರ್ ಬಗ್ಗೆ ಸಾಕಷ್ಟು ಚರ್ಚೆಗಳಾಗುತ್ತಿದೆ. ಅದರ ಬಗ್ಗೆ ಒಬ್ಬೊಬ್ಬರ ಮನಸ್ಸಿನಲ್ಲಿ ಒಂದೊಂದು ಹೊಳೆಯುತ್ತಿದೆ. ನಿಮ್ಮಗೆಲ್ಲಾ ಏನು ಅನಿಸುವುದೊ, ಅದು ಚಿತ್ರದಲ್ಲಿ ಇರುತ್ತದೆ. ನಾನು ನನ್ನ ನಿರ್ದೇಶಕರ ತಂಡ ಹಾಗೂ ಇನ್ನೂ ಕೆಲವರ ಬಳಿ ಕಥೆಯ ಬಗ್ಗೆ ಹೇಳಿರುತ್ತೇನೆ. ಅವರಿಗೆ ಅದನ್ನು ನಿಮಗೆ ಹೇಳಲು ಬರುವುದಿಲ್ಲ ಎಂಡು ನಕ್ಕ ಉಪೇಂದ್ರ ಅವರು ಒಟ್ಟಿನಲ್ಲಿ ಉತ್ತಮ ಚಿತ್ರವೊಂದನ್ನು ನಿಮ್ಮ ಮುಂದೆ ಇಡುತ್ತೇನೆ” ಎಂದಿದ್ದಾರೆ.