Home Food ಪಡಿತರ ಚೀಟಿದಾರರಿಗೆ ವಿತರಿಸಿದ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಪತ್ತೆ !!? | ಜನರಿಂದ ವ್ಯಾಪಕ ಆಕ್ರೋಶ,...

ಪಡಿತರ ಚೀಟಿದಾರರಿಗೆ ವಿತರಿಸಿದ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಪತ್ತೆ !!? | ಜನರಿಂದ ವ್ಯಾಪಕ ಆಕ್ರೋಶ, ತನಿಖೆಗೆ ಆಗ್ರಹ

Hindu neighbor gifts plot of land

Hindu neighbour gifts land to Muslim journalist

ಸರ್ಕಾರದಿಂದ ಪಡಿತರ ಚೀಟಿದಾರರಿಗೆ ವಿತರಿಸುತ್ತಿರುವ ಅಕ್ಕಿಯಲ್ಲಿ ಪ್ಲಾಸ್ಟಿಕ್​ ಅಕ್ಕಿ ಕಲಬೆರೆಕೆ ಆಗಿದೆ ಎಂಬ ಆರೋಪ ಕೇಳಿಬಂದಿದ್ದು, ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಕೀಲಗಾಣಿ ಹಾಗೂ ಊರುಕುಂಟೆ ಮಿಟ್ಟೂರು ಗ್ರಾಮದ ಪಡಿತರ ಕೇಂದ್ರದಲ್ಲಿ ಫಲಾನುಭವಿಗಳಿಗೆ ವಿತರಣೆ ಮಾಡಲಾದ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಮಿಶ್ರಣ ಮಾಡಲಾಗಿದೆ ಹಲವರು ಆರೋಪಿಸಿದ್ದಾರೆ.

ಇದಕ್ಕೆ ಪೂರಕ ಎಂಬಂತೆ ಅಕ್ಕಿಯಲ್ಲಿ ಕೆಲವೊಂದು ಅಕ್ಕಿ ಕಾಳುಗಳು ಸಿಕ್ಕಿದ್ದು, ಅದು ನೀರಿನಲ್ಲಿ ತೇಲುತ್ತಿದೆ. ಅಲ್ಲದೆ ಅನ್ನ ಮಾಡಲು ಇಟ್ಟರೆ ಕರಗಿ ಹೋಗುತ್ತಿದೆ ಎಂದು ಹೇಳಲಾಗುತ್ತಿದೆ.

ಈ ಪ್ಲಾಸ್ಟಿಕ್ ಅಕ್ಕಿಯ ಬಗ್ಗೆ ತನಿಖೆ ನಡೆಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.