ಗುರುವಾರ, 29 ಅಕ್ಟೋಬರ್ 2026
Trending

Karnataka: ಮಹಿಳೆಯರಿಗಾಗಿ ಉಚಿತ ಬ್ಯೂಟಿ ಪಾರ್ಲರ್ ತರಬೇತಿಗೆ ಅರ್ಜಿ ಆಹ್ವಾನ

Karnataka: ಬೆಂಗಳೂರು (Bangalore) ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ದಿನಾಂಕ: 06/10/2025 ರಿಂದ 35 ದಿನಗಳ ಕಾಲ

Advertisement
Advertisement

Karnataka: ಬೆಂಗಳೂರು (Bangalore) ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ದಿನಾಂಕ: 06/10/2025 ರಿಂದ 35 ದಿನಗಳ ಕಾಲ ನಿರುದ್ಯೋಗಿ ಮಹಿಳೆಯರಿಗಾಗಿ ಉಚಿತ ಬ್ಯೂಟಿ ಪಾರ್ಲರ್ ತರಬೇತಿ ನಡೆಯಲಿದೆ.

Sponsored

Advertisement
Advertisement

ಸ್ವಯಂ ಉದ್ಯೋಗಿಗಳಾಗಲು ಬಯಸುವ 18 ರಿಂದ 45 ವರ್ಷ ವಯಸ್ಸಿನ ಕರ್ನಾಟಕ (Karnataka) ರಾಜ್ಯದ ಯಾವುದೇ ಜಿಲ್ಲೆಯ ನಿರುದ್ಯೋಗಿ ಮಹಿಳೆಯರು ತರಬೇತಿ ಪಡೆಯಲು ಅವಕಾಶವಿದೆ.

Advertisement

ಆಸಕ್ತಿಯುಳ್ಳವರು ಸೆಪ್ಟೆಂಬರ್ 30 ರಂದು ಬೆಳಗ್ಗೆ 9.00 ಘಂಟೆಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಸೊಣ್ಣಹಳ್ಳಿಪುರ, ಹಸಿಗಾಳ (ಅಂಚೆ), ಹೊಸಕೋಟೆ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ನಡೆಯುವ ನೇರ ಸಂದರ್ಶನಕ್ಕೆ ವಿದ್ಯಾರ್ಹತೆ ಮತ್ತು ವಿಳಾಸ ದಾಖಲಾತಿಗಳೊಂದಿಗೆ ಹಾಜರಾಗುವಂತೆ ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತರಬೇತಿ ಸಮಯದಲ್ಲಿ, ಊಟ ಹಾಗೂ ವಸತಿ ಸೌಕರ್ಯಗಳು ಉಚಿತವಾಗಿ ಅಭ್ಯರ್ಥಿ ಗಳಿಗೆ ಕಲ್ಪಿಸಲಾಗುವುದು. ಗ್ರಾಮೀಣ ಭಾಗದ ಬಿಪಿಎಲ್ ಅಭ್ಯರ್ಥಿಗಳಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು. ಅಭ್ಯರ್ಥಿಗಳಿಗೆ ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು. ತರಬೇತಿ ನಂತರ ಕೇಂದ್ರ ಸರ್ಕಾರದ ಗ್ರಾಮೀಣ ಸಚಿವಾಲಯದಿಂದ ಪ್ರಮಾಣ ಪತ್ರವನ್ನು ವಿತರಿಸಲಾಗುವುದು.

ಇದನ್ನೂ ಓದಿ:Health Tips: ಗುಲಾಬಿ ಉಪ್ಪು ಮತ್ತು ಸಾಮಾನ್ಯ ಉಪ್ಪಿನ ವ್ಯತ್ಯಾಸವೇನು?

ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 8970476050, 9591514154, 9686248369, 8970446644, 9505894247 ಗಳನ್ನು ಸಂಪರ್ಕಿಸುವುದು.

Advertisement
Advertisement