Home Health BREAKING NEWS : ನಾಳೆಯಿಂದ ರಾಜ್ಯಾದ್ಯಂತ 108 ಆಂಬುಲೆನ್ಸ್ ಸೇವೆ ಸ್ಥಗಿತ !

BREAKING NEWS : ನಾಳೆಯಿಂದ ರಾಜ್ಯಾದ್ಯಂತ 108 ಆಂಬುಲೆನ್ಸ್ ಸೇವೆ ಸ್ಥಗಿತ !

Hindu neighbor gifts plot of land

Hindu neighbour gifts land to Muslim journalist

ಬೆಂಗಳೂರು ಕೆಲ ದಿನಗಳ ಹಿಂದಷ್ಟೇ 108 ಆಂಬುಲೆನ್ಸ್ ಸೇವೆಯ ( 108 Ambulance Service ) ಸರ್ವರ್ ಸಮಸ್ಯೆಯಿಂದಾಗಿ ರಾಜ್ಯದ್ಯಂತ ಆಂಬುಲೆನ್ಸ್ ಸೇವೆಯಲ್ಲಿ ವ್ಯತ್ಯಯ ಉಂಟಾಗಿದ್ದಲ್ಲದೆ, ಇದರಿದಾಗಿ ರೋಗಿಗಳಿಗೆ ಸೂಕ್ತ ಕಾಲದಲ್ಲಿ ಆಂಬುಲೆನ್ಸ್ ಸೇವೆ ಸಿಗದೇ ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು. ಇದೀಗ ಬಾಕಿ ವೇತನ ಬಿಡುಗಡೆಗೆ ಒತ್ತಾಯಿಸಿ ನಾಳೆಯಿಂದ ಆಂಬುಲೆನ್ಸ್ ನೌಕರರು ( Ambulance employee ) ಮುಷ್ಕರ ನಡೆಸಲಿದ್ದು, ಹೀಗಾಗಿ ನಾಳೆಯಿಂದ ರಾಜ್ಯಾದ್ಯಂತ ಆಂಬುಲೆನ್ಸ್ ಸೇವೆ ಸ್ಥಗಿತಗೊಳ್ಳಲಿದೆ ಎನ್ನಲಾಗುತ್ತಿದೆ.

108 ಆಂಬುಲೆನ್ಸ್ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷ ಪರಮಶಿವಯ್ಯ ಈ ಕುರಿತು ಪ್ರತಿಕ್ರಯಿಸಿದ್ದು, ಕಳೆದ ಎರಡು ತಿಂಗಳಿನಿಂದ ರಾಜ್ಯದಲ್ಲಿ ಆಂಬುಲೆನ್ಸ್ ಸೇವೆ ಒದಗಿಸುತ್ತಿರುವ ಜಿವಿಕೆ ವೇತನವನ್ನು ಬಾಕಿ ಉಳಿಸಿಕೊಂಡಿದ್ದು, ವೇತನವಿಲ್ಲದೇ ನೌಕರರು ಸಂಕಷ್ಟಕ್ಕೆ ಸಿಲುಕುವಂತಾಗಿದೆ.

ಈ ಹಿಂದೆ ಅನೇಕ ಬಾರಿ ವೇತನ ಬಿಡುಗಡೆ ಮಾಡಿದ್ದರು ಕೂಡ ಪ್ರಯೋಜನವಾಗದೆ ಇರುವುದರಿಂದ ಈ ಹಿನ್ನೆಲೆಯಲ್ಲಿ ನಾಳೆ ಸಂಜೆಯೊಳಗೆ ಸಂಬಳ ನೀಡದೇ ಇದ್ದರೇ ಆಂಬುಲೆನ್ಸ್ ಸೇವೆ ಸ್ಥಗಿತಗೊಳಿಸೋದಾಗಿ ಎಚ್ಚರಿಕೆ ನೀಡಿದ್ದಾರೆ.

ಆಂಬುಲೆನ್ಸ್ ನೌಕರರಿಗೆ ಗುರುವಾರದ ಒಳಗೆ ಬಾಕಿ ವೇತನ ನೀಡದೇ ಇದ್ದರೇ ರಾಜ್ಯಾದ್ಯಂತ ಆಂಬುಲೆನ್ಸ್ ಸೇವೆಯನ್ನು ಸಂಪೂರ್ಣ ಸ್ಥಗಿತಗೊಳಿಸಲಾಗುತ್ತದೆ. ಆಂಬುಲೆನ್ಸ್ ಸೇವೆ ಸ್ಥಗಿತದಿಂದ ಆರೋಗ್ಯ ತುರ್ತು ಪರಿಸ್ಥಿತಿ ಉಂಟಾದರೇ ಅದಕ್ಕೆ ಜಿವಿಕೆ ಸಂಸ್ಥೆಯೇ ನೇರ ಹೊಣೆಯಾಗಲಿದೆ.

ಈ ನಡುವೆ ಆಂಬುಲೆನ್ಸ್ ಸೇವೆ ಸ್ಥಗಿತಗೊಳಿಸುವ ಮುಷ್ಕರಕ್ಕೆ ಎಚ್ಚರಿಕೆ ನೀಡಿರುವ ನೌಕರರೊಂದಿಗೆ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ( Minister Dr K Sudhakar ) ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಆರೋಗ್ಯ ಸೇವೆಯಲ್ಲಿ ಯಾವುದೇ ವ್ಯತ್ಯಯ ಉಂಟಾಗದಂತೆ ಮುಂದುವರೆಸಿಕೊಂಡು ಹೋಗುವಂತೆ, ಬಾಕಿ ವೇತನ ಬಿಡುಗಡೆ ಕ್ರಮ ಕೈಗೊಳ್ಳಲಾಗುತ್ತದೆ ಎಂಬುದಾಗಿಯೂ ಭರವಸೆ ನೀಡಿದ್ದಾರೆ ಎನ್ನಲಾಗಿದೆ.