Home Health Dakshina kannada: ದ.ಕ‌ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಚಿಕನ್‌ ಪಾಕ್ಸ್: ಮುನ್ನೆಚ್ಚರಿಕೆ ವಹಿಸಲು ಸೂಚನೆ

Dakshina kannada: ದ.ಕ‌ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಚಿಕನ್‌ ಪಾಕ್ಸ್: ಮುನ್ನೆಚ್ಚರಿಕೆ ವಹಿಸಲು ಸೂಚನೆ

Hindu neighbor gifts plot of land

Hindu neighbour gifts land to Muslim journalist

Dakshina kannada: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚಿಕನ್ ಪಾಕ್ಸ್ ಪ್ರಕರಣಗಳು ದಾಖಲಾಗುತ್ತಿದ್ದು, ಸ್ಥಳೀಯವಾಗಿ ಹರಡದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಅಳವಡಿಸಲು ಆರೋಗ್ಯ ಇಲಾಖೆ ಸೂಚಿಸಿದೆ.

ಶಾಲಾ ಮಕ್ಕಳಲ್ಲಿ ಅಥವಾ ಸಾರ್ವಜನಿಕರಲ್ಲಿ ಖಾಯಿಲೆಯ ಲಕ್ಷಣಗಳು ಕಂಡು ಬಂದಲ್ಲಿ ತಕ್ಷಣಕ್ಕೆ ಚಿಕಿತ್ಸೆಯನ್ನು ಪಡೆಯುವುದರೊಂದಿಗೆ ಸೋಂಕು ಹರಡದಂತೆ ಕ್ರಮವಹಿಸಬೇಕು ಎಂದು ಸೂಚನೆ ನೀಡಲಾಗಿದೆ.

ಚಿಕನ್ ಪಾಕ್ಸ್ ಮಕ್ಕಳಲ್ಲಿ, ಯಾವುದೇ ತೊಂದರೆ ಇಲ್ಲದೆ ಸಂಪೂರ್ಣವಾಗಿ ಗುಣವಾಗುತ್ತದೆ. ಒಮ್ಮೆ ಚಿಕನ್ ಪಾಕ್ಸ್ನಿಂದ ಬಳಲಿದ ವ್ಯಕ್ತಿ ಜೀವಿತಾವಧಿಯವರೆಗೂ ಅದರ ವಿರುದ್ಧ ರೋಗ ನಿರೋಧಕ ಶಕ್ತಿಯನ್ನು ಹೊಂದುತ್ತಾನೆ.ಪೌಷ್ಠಿಕ ಆಹಾರ ಸೇವನೆಯಿಂದ ದೇಹದ ರೋಗ ನಿರೋಧಕ ವ್ಯವಸ್ಥೆಯನ್ನು ಸದೃಢಗೊಳಿಸಿಕೊಳ್ಳುವುದೂ ರೋಗ ನಿಯಂತ್ರಣದಲ್ಲಿ ಮುಖ್ಯ ಪಾತ್ರವನ್ನು ವಹಿಸುತ್ತದೆ. ಸೋಂಕಿತ ರೋಗಿಯ ಬೊಕ್ಕೆಗಳನ್ನು ಮುಟ್ಟಿದಾಗ ಕೈಗಳನ್ನು ಸೋಪು ಮತ್ತು ನೀರಿನಿಂದ ಸ್ವಚ್ಛ ಮಾಡಿಕೊಳ್ಳಬೇಕು.ಮನೆ,ಶಾಲೆ, ಕಿಂಡರ್ ಗಾರ್ಡನ್ ಮುಂತಾದ ಸ್ಥಳಗಳಲ್ಲಿ ಸ್ವಚ್ಛತೆಯನ್ನು ಕಾಪಾಡಬೇಕು. ಸೋಂಕಿತ ಮಕ್ಕಳ ಜೊತೆಗೆ ಹತ್ತಿರದ ಸಂಪರ್ಕವನ್ನು ಇಡಬಾರದು. ಸೋಂಕಿತ ಜಾಗವನ್ನು ಅಥವಾ ಮಕ್ಕಳ ಆಟಿಕೆಗಳನ್ನು ಸೋಪು ಮತ್ತು ನೀರಿನಿಂದ ಸ್ವಚ್ಛ ಮಾಡಿಕೊಳ್ಳಬೇಕು.ಅನಾರೋಗ್ಯವಿದ್ದರೆ ಹತ್ತಿರದ ಸರ್ಕಾರಿ ಆಸ್ಪತ್ರೆಗಳಲ್ಲಿ ಪರೀಕ್ಷಿಸಿಕೊಳ್ಳಬೇಕು ಹಾಗೂ ವೈದ್ಯರನ್ನು ಸಂಪರ್ಕಿಸದೇ ಔಷಧವನ್ನು ತೆಗೆದುಕೊಳ್ಳಬಾರದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.