ಶನಿವಾರ, 24 ಅಕ್ಟೋಬರ್ 2026

ಆರೋಗ್ಯ ಸಚಿವರಿಗೆ ಕೊರೊನಾ ಪಾಸಿಟಿವ್

ಕರ್ನಾಟಕದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್‌ಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ತಮಗೆ ಸೋಂಕು ಖಾತ್ರಿ ಆಗಿರುವುದರ ಬಗ್ಗೆ ಸ್ವತಃ ಸಚಿವರೇ ಟ್ವೀಟ್ ಮಾಡಿದ್ದಾರೆ.

“ಮೂರು ಅಲೆಗಳ ಸಂದರ್ಭದಲ್ಲೂ ಕೋವಿಡ್ ಸೋಂಕಿನಿಂದ ಪಾರಾಗಿದ್ದ ನಾನು ಈಗ ಸೋಂಕಿಗೆ ತುತ್ತಾಗಿದ್ದೇನೆ. ಸಣ್ಣ ಪ್ರಮಾಣದ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೋವಿಡ್ ಟೆಸ್ಟ್ ಮಾಡಿಸಿದಾಗ ಪಾಸಿಟಿವ್ ಆಗಿರುವುದು ಪತ್ತೆಯಾಗಿದೆ. ಕೆಲ ರೋಗ ಲಕ್ಷಣಗಳು ಕಾಣಿಸಿಕೊಂಡಿದ್ದು ಹೋಮ್ ಐಸೋಲೇಷನ್ ನಲ್ಲಿ ಇದ್ದುಕೊಂಡೇ ಚಿಕಿತ್ಸೆ ಪಡೆಯುತ್ತಿದ್ದೇನೆ,” ಎಂದು ಸಚಿವರು ಟ್ವೀಟ್ ಮಾಡಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ