Home Health ಇಳಿಜಾರು ದಾರಿಯಲ್ಲಿ ಸಾಗಿದ್ದ ಕೊರೋನಾ ಪ್ರಕರಣಗಳಲ್ಲಿ ದಿಢೀರ್ ಹೆಚ್ಚಳ | ರಾಜ್ಯದಲ್ಲಿ ನಿನ್ನೆ 1116 ಹೊಸ...

ಇಳಿಜಾರು ದಾರಿಯಲ್ಲಿ ಸಾಗಿದ್ದ ಕೊರೋನಾ ಪ್ರಕರಣಗಳಲ್ಲಿ ದಿಢೀರ್ ಹೆಚ್ಚಳ | ರಾಜ್ಯದಲ್ಲಿ ನಿನ್ನೆ 1116 ಹೊಸ ಸೊಂಕಿತರು !

Hindu neighbor gifts plot of land

Hindu neighbour gifts land to Muslim journalist

ಬೆಂಗಳೂರು: ರಾಜ್ಯದಲ್ಲಿ ಇಳಿಜಾರು ಹಾದಿಯಲ್ಲಿ ಸಾಗಿದ್ದ ಕೊರೋನಾ ಪ್ರಕರಣಗಳ ಸಂಖ್ಯೆ ನಿನ್ನೆ ದಿಢೀರ್ ಏರಿಕೆಯಾಗಿದ್ದು ಕಳೆದ 24 ಗಂಟೆಯಲ್ಲಿ 1116 ಕೊರೋನಾ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,64,083ಕ್ಕೆ ಏರಿಕೆಯಾಗಿದೆ. ಸದ್ದಿಲ್ಲದೆ ಮತ್ತೆ ಹಬ್ಬುತ್ತಿದೆಯೆ ಸಾಂಕ್ರಾಮಿಕ ಎಂಬ ಅನುಮಾನ ಮೂಡಿಸಿದೆ.

ನಿನ್ನೆ ಮಹಾಮಾರಿಗೆ 8 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಒಟ್ಟು ಸಂಖ್ಯೆ 37,537ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಬುಲೆಟಿನ್ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಇಂದು 462 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,42,332ಕ್ಕೆ ಏರಿಕೆಯಾಗಿದೆ. ಇಂದು ನಗರದಲ್ಲಿ 5 ಮಂದಿ ಸಾವನ್ನಪ್ಪಿದ್ದಾರೆ.
ರಾಜ್ಯದಲ್ಲಿ ಇಂದು 970 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 29,10,626ಕ್ಕೆ ಏರಿಕೆಯಾಗಿದೆ. ಇನ್ನು15,892 ಸಕ್ರೀಯ ಪ್ರಕರಣಗಳಿವೆ.

ರಾಜ್ಯಾದ್ಯಂತ ಇಂದು 1,70,306ಕೋವಿಡ್ ಟೆಸ್ಟ್ ನಡೆಸಲಾಗಿದ್ದು, 1116 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 0.65ಕ್ಕೆ ಇಳಿದಿದೆ.
ರಾಜ್ಯದ ನಾಲ್ಕು ಜಿಲ್ಲೆಗಳಾದ ಬಾಗಲಕೋಟೆ, ಬೀದರ್, ಗದಗ, ರಾಯಚೂರು, ರಾಮನಗರ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ ವರದಿಯಾಗಿದೆ.