Home Health ರಾಜ್ಯದಲ್ಲಿ ಮತ್ತೆ ಮಾಸ್ಕ್ ಕಡ್ಡಾಯ; ತಪ್ಪಿದ್ದಲ್ಲಿ ದಂಡ!

ರಾಜ್ಯದಲ್ಲಿ ಮತ್ತೆ ಮಾಸ್ಕ್ ಕಡ್ಡಾಯ; ತಪ್ಪಿದ್ದಲ್ಲಿ ದಂಡ!

Hindu neighbor gifts plot of land

Hindu neighbour gifts land to Muslim journalist

ಬೆಂಗಳೂರು : ಕೋವಿಡ್ ಪ್ರಕರಣದ ಜೊತೆಗೆ, ಒಮಿಕ್ರಾನ್ ಉಪತಳಿಗಳು ರಾಜ್ಯದಲ್ಲಿ ಪತ್ತೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದವರಿಗೆ ದಂಡ ವಿಧಿಸಲು ಕರ್ನಾಟಕದ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ತಜ್ಞರು ಆರೋಗ್ಯ ಇಲಾಖೆಗೆ ಶಿಫಾರಸು ಮಾಡಿದ್ದಾರೆ.

ಕರ್ನಾಟಕದ ಕೋವಿಡ್ ತಾಂತ್ರಿಕ ಸಲಹಾ ಸಮಿತಿ (ಟಿಎಸಿ) ಸಭೆ ನಡೆಸಿದ್ದು, ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳ ಬಗ್ಗೆ ವಿವರವಾದ ಚರ್ಚೆ ನಡೆಸಿದರು ಮತ್ತು ಮಾಸ್ಕ್ ಧರಿಸದವರಿಗೆ ಸರ್ಕಾರಿ ಸಂಸ್ಥೆಗಳನ್ನು ಪ್ರವೇಶಿಸಲು ಅವಕಾಶ ನೀಡಬಾರದು ಎಂದು ಶಿಫಾರಸು ಮಾಡಿದರು. ಶಿಫಾರಸುಗಳನ್ನು ಸರ್ಕಾರಕ್ಕೆ ರವಾನಿಸಲಾಗಿದ್ದು, ವಾರದೊಳಗೆ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ ಎಂಬುದು ಸ್ಪಷ್ಟವಾಗಿದೆ. ಆದ್ದರಿಂದ, ಕೋವಿಡ್-ಸೂಕ್ತ ನಡವಳಿಕೆಯನ್ನು (ಸಿಎಬಿ) ಅನುಸರಿಸುವುದು ಮತ್ತು ಲಸಿಕೆ ವ್ಯಾಪ್ತಿಯನ್ನು ಸುಧಾರಿಸುವುದು ಇಂದಿನ ಅಗತ್ಯವಾಗಿದೆ. ಆದ್ದರಿಂದ ಶಿಫಾರಸು ಮಾಡಲಾಗಿದೆ ಎಂದು ಟಿಎಸಿ ಸದಸ್ಯರೊಬ್ಬರು ಮಾಹಿತಿ ನೀಡಿದ್ದಾರೆ. ಹೀಗಾಗಿ ಸಾರ್ವಜನಿಕ ಪ್ರದೇಶಗಳಲ್ಲಿ ಮಾಸ್ಕ್ ಧರಿಸದೆ ಓಡಾಡುವವರಿಗೆ ದಂಡ ವಿಧಿಸುವಂತೆ ಸೂಚನೆ ನೀಡಲಾಗಿದೆ.