Home Interesting ವಿವಾಹವಾಗಲು ಬಯಸುವವರಿಗೆ ಸಿಹಿ ಸುದ್ದಿ: ಮೇ 3 ರಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸಾಮೂಹಿಕ ವಿವಾಹ...

ವಿವಾಹವಾಗಲು ಬಯಸುವವರಿಗೆ ಸಿಹಿ ಸುದ್ದಿ: ಮೇ 3 ರಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸಾಮೂಹಿಕ ವಿವಾಹ !!

Hindu neighbor gifts plot of land

Hindu neighbour gifts land to Muslim journalist

ಮದುವೆ ಎಂಬ ಸುಮಧುರ ಬಾಂಧವ್ಯಕ್ಕೆ ಮುನ್ನುಡಿ ಬರೆಯಲು ಬಯಸುವ ವಧುವರರಿಗೆ ಸಿಹಿ ಸುದ್ದಿಯೊಂದು ಹೊರಬಿದ್ದಿದೆ. ಆರ್ಥಿಕವಾಗಿ ಸಂಕಷ್ಟದಲ್ಲಿದ್ದು, ಮದುವೆಯಾಗಲು ಸಾಧ್ಯವಾಗದೆ ಇದ್ದವರಿಗೆ ಸುವರ್ಣ ಅವಕಾಶ.

ಕರಾವಳಿಯ ಪ್ರಸಿದ್ಧ ಐತಿಹಾಸಿಕ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮೇ 3 ರಂದು ಸಂಜೆ 6.40 ಕ್ಕೆ ಗೋಧೂಳಿ ಲಗ್ನದಲ್ಲಿ 51ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಆಯೋಜಿಸಲಾಗಿದ್ದು, ಸಾಮೂಹಿಕ ವಿವಾಹದಲ್ಲಿ ಭಾಗ ವಹಿಸಲು ಬಯಸುವವರು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಸಾಮೂಹಿಕ ವಿವಾಹದಲ್ಲಿ ಎರಡನೇ ಮದುವೆಗೆ ಅವಕಾಶವಿಲ್ಲ ಎಂಬುದನ್ನು ಗಮನಿಸಬೇಕು. ವಧುವಿಗೆ ಸೀರೆ, ರವಿಕೆ ಕಣ, ಮಂಗಳಸೂತ್ರ, ವರನಿಗೆ ಧೋತಿ, ಶಾಲು ಒದಗಿಸಲಾಗುತ್ತದೆ. ಇದರ ಜೊತೆಗೆ ಮದುವೆಯ ಸಂಪೂರ್ಣ ವೆಚ್ಚವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮಸ್ಥಳ ಟ್ರಸ್ಟ್ ಭರಿಸಲಿದೆ.

ಸಾಮೂಹಿಕ ವಿವಾಹದಲ್ಲಿ ಮದುವೆಯಾಗಲು ಇಚ್ಛಿಸುವವರು ಏಪ್ರಿಲ್ 20 ರೊಳಗೆ ಸೂಕ್ತ ದಾಖಲೆಗಳ ಸಹಿತ ಅರ್ಜಿ ಸಲ್ಲಿಸತಕ್ಕದ್ದು. ಈ ಕುರಿತ ಹೆಚ್ಚಿನ ಮಾಹಿತಿ ಪಡೆಯಲು ದೂರವಾಣಿ ಸಂಖ್ಯೆ 08256 26644, ವಾಟ್ಸಾಪ್ 96634 64648 ಸಂಪರ್ಕಿಸಬಹುದಾಗಿದೆ.