Home Interesting ‘ಓಬವ್ವ ನಮ್ಮ ನಾರಿ ಶಕ್ತಿಯ ಪ್ರತೀಕವಾಗಿ ನಮಗೆ ಸ್ಫೂರ್ತಿ’ಎಂದು ವೀರವನಿತೆ ಒನಕೆ ಓಬವ್ವ ಕುರಿತು ಕನ್ನಡದಲ್ಲೇ...

‘ಓಬವ್ವ ನಮ್ಮ ನಾರಿ ಶಕ್ತಿಯ ಪ್ರತೀಕವಾಗಿ ನಮಗೆ ಸ್ಫೂರ್ತಿ’ಎಂದು ವೀರವನಿತೆ ಒನಕೆ ಓಬವ್ವ ಕುರಿತು ಕನ್ನಡದಲ್ಲೇ ಟ್ವೀಟ್ ಮಾಡಿದ ನರೇಂದ್ರ ಮೋದಿ

Hindu neighbor gifts plot of land

Hindu neighbour gifts land to Muslim journalist

ಬೆಂಗಳೂರು: ಮುಂಬೈ ಕರ್ನಾಟಕವನ್ನು ‘ಕಿತ್ತೂರು ಕರ್ನಾಟಕ’ ಎಂದು ನಾಮಕರಣ ಮಾಡಿರುವ ಬೆನ್ನಲ್ಲೇ ಇಂದು ಒನಕೆ ಓಬವ್ವ ಜಯಂತಿ ಆಚರಿಸಲು ರಾಜ್ಯ ಸರ್ಕಾರ ಆದೇಶ ನೀಡಿದ್ದು,ಅದರಂತೆ ಇಂದು ನಾಡಿನಾದ್ಯಂತ ಒನಕೆ ಓಬವ್ವ ಜಯಂತಿ ಆಚರಣೆ ಮಾಡಲಾಗುತ್ತಿದೆ.ಪ್ರಧಾನಿ ನರೇಂದ್ರ ಮೋದಿ, ವೀರವನಿತೆ ಒನಕೆ ಓಬವ್ವ ಅವರನ್ನ ನೆನಪಿಸಿಕೊಂಡು ಕನ್ನಡದಲ್ಲೇ ಟ್ವೀಟ್ ಮಾಡುವ ಮೂಲಕ ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.

‘ವೀರವನಿತೆ ಒನಕೆ ಓಬವ್ವ ಜಯಂತಿಯ ವಿಶೇಷ ಸಂದರ್ಭದಲ್ಲಿ ಅವರಿಗೆ ನಮನ ಸಲ್ಲಿಸುತ್ತೇನೆ. ತನ್ನ ಜನರು ಮತ್ತು ಸಂಸ್ಕೃತಿಯನ್ನು ರಕ್ಷಿಸಲು ಅವರು ತೋರಿದ ಧೈರ್ಯವನ್ನು ಎಂದಿಗೂ ಯಾರೊಬ್ಬರೂ ಮರೆಯಲು ಸಾಧ್ಯವಿಲ್ಲ. ಅವರು ನಮ್ಮ ನಾರಿ ಶಕ್ತಿಯ ಪ್ರತೀಕವಾಗಿ ನಮಗೆ ಸ್ಫೂರ್ತಿ ನೀಡುತ್ತಾರೆ’ ಎಂದು ಮೋದಿ ಕನ್ನಡ ಮತ್ತು ಇಂಗ್ಲಿಷ್ ನಲ್ಲಿ ಟ್ವೀರ್ ಮಾಡುವ ಮೂಲಕ ಬಣ್ಣಿಸಿದ್ದಾರೆ.

ಓಬವ್ವಳ ದೇಶಪ್ರೇಮದ ಕಥೆ ಕೇಳುವಾಗ ಮೈ ಜುಮ್ಮೆನಿಸುತ್ತದೆ. ಒನಕೆ ಓಬವ್ವ 18ನೇ ಶತಮಾನದ ಚಿತ್ರದುರ್ಗದ ಕೋಟೆಯ ಪಾಳೆಗಾರನಾಗಿದ್ದ ಮದಕರಿ ನಾಯಕನ ಕೋಟೆಯ ಕಾವಲುಗಾರ ಕಹಳೆ ಮದ್ದಹನುಮಪ್ಪನ ಹೆಂಡತಿ. ಇವರನ್ನು ಕನ್ನಡ ನಾಡಿನ ವೀರವನಿತೆಯರಾದ ಕಿತ್ತೂರು ಚೆನ್ನಮ್ಮ,ರಾಣಿ ಅಬ್ಬಕ್ಕ ರ ಸಾಲಿನಲ್ಲಿ ಪರಿಗಣಿಸಲಾಗುತ್ತದೆ.

ಹೈದರಾಲಿಯು ಚಿತ್ರದುರ್ಗದ ಮೇಲೆ ಹಟಾತ್ತಾಗಿ ಆಕ್ರಮಣ ಮಾಡಿದಾಗ ಓಬವ್ವ ತನ್ನ ಒನಕೆಯನ್ನು ಅಸ್ತ್ರವಾಗಿ ಇಟ್ಟುಕೊಂಡು ಶತ್ರುಗಳನ್ನು ಎದುರಿಸಿದ್ದಳು. ನೂರಾರು ಶತ್ರು ಸೈನಿಕರನ್ನು ತನ್ನ ಒನಕೆಯಿಂದಲೇ ಕೊಂದು ಕೊನೆಯಲ್ಲಿ ಎದುರಾಳಿಯು ಬೆನ್ನಹಿಂದೆ ಬಂದದ್ದನ್ನು ಗಮನಿಸಲಾಗದೆ ಶತ್ರುವಿನ ಕತ್ತಿಗೆ ಬಲಿಯಾದರು. ಅಂದಿನಿಂದ ಅವರಿಗೆ ಒನಕೆ ಓಬವ್ವ ಎಂದು ಬಿರುದು ಸಿಕ್ಕಿತು.