ಚಿಕ್ಕಮಗಳೂರು: ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಶೀಘ್ರದಲ್ಲಿ ಭರ್ತಿ ಮಾಡಲು ಪ್ರಕ್ರಿಯೆ ಆರಂಭಿಸಲಾಗುವುದು. ಮೂರು ವರ್ಷ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವವರನ್ನು ಖಾಯಂಗೊಳಿಸುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು ಟಿ ಖಾದರ್ ತಿಳಿಸಿದರು.
Sponsoredಶನಿವಾರ ನಗರದ ಜಿ.ಪಂ.ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಖಾಲಿ ಹುದ್ದೆಗಳ ಭರ್ತಿಗೆ ಆರೋಗ್ಯ ಇಲಾಖೆ ಕಾರ್ಯದರ್ಶಿಯೊಂದಿಗೆ ಚರ್ಚಿಸಲಾಗಿದ್ದು, ಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತಿರುವವರನ್ನು ಖಾಯಂ ಮಾಡಲು ಸಿಎಂ ಮತ್ತು ಹಣಕಾಸು ಇಲಾಖೆ ಜೊತೆ ಚರ್ಚಿಸಲಾಗಿದೆ ಎಂದು ಹೇಳಿದರು.




