Home International ಶ್ರೀಲಂಕಾದಲ್ಲಿ ತುರ್ತುಪರಿಸ್ಥಿತಿ ಘೋಷಣೆ : ಅಧ್ಯಕ್ಷ ಗೋತಬಯ ರಾಜಪಕ್ಸೆ

ಶ್ರೀಲಂಕಾದಲ್ಲಿ ತುರ್ತುಪರಿಸ್ಥಿತಿ ಘೋಷಣೆ : ಅಧ್ಯಕ್ಷ ಗೋತಬಯ ರಾಜಪಕ್ಸೆ

Hindu neighbor gifts plot of land

Hindu neighbour gifts land to Muslim journalist

ಶ್ರೀಲಂಕಾದಲ್ಲಿ ಸೃಷ್ಟಿಯಾದ ಆರ್ಥಿಕ ಬಿಕ್ಕಟ್ಟು, ಸರ್ಕಾರದ ವಿರುದ್ಧ ಸಾರ್ವಜನಿಕರು ನಡೆಸುತ್ತಿರುವ ನಿರಂತರ ಪ್ರತಿಭಟನೆಯ ಮಧ್ಯೆ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ.

ಹೆಚ್ಚಿನ ಬಾಹ್ಯ ಸಾಲದಿಂದ ಕಂಗೆಟ್ಟಿರುವ ದ್ವೀಪ ರಾಷ್ಟ್ರ ಶ್ರೀಲಂಕಾದಲ್ಲಿ ಅಧ್ಯಕ್ಷ ಗೋತಬಯ ರಾಜಪಕ್ಸೆ ನಿನ್ನೆ ಮಧ್ಯರಾತ್ರಿಯಿಂದಲೇ ತುರ್ತು ಪರಿಸ್ಥಿತಿಯನ್ನು ಘೋಷಿಸಿದ್ದಾರೆ.

ಆರ್ಥಿಕ ಬಿಕ್ಕಟ್ಟಿನ ಬಗ್ಗೆ ಅವರ ರಾಜೀನಾಮೆಗೆ ಒತ್ತಾಯಿಸಿ ಕಾರ್ಮಿಕ ಸಂಘಟನೆಗಳು ಶುಕ್ರವಾರ ರಾಷ್ಟ್ರವ್ಯಾಪಿ ಮುಷ್ಕರ ಮಾಡುತ್ತಿತ್ತು. ಈ ಹಿನ್ನೆಲೆ “ಸಾರ್ವಜನಿಕ ಕಾನೂನು ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಕಠಿಣ ನಿಯಮಗಳನ್ನು ಜಾರಿಗೊಳಿಸಲಾಗಿದೆ ಎಂದು ಅಧ್ಯಕ್ಷ ಗೋತಾಬಯ ರಾಜಪಕ್ಸೆಯವರ ವಕ್ತಾರರು ತಿಳಿಸಿದ್ದಾರೆ.