ಶನಿವಾರ, 24 ಅಕ್ಟೋಬರ್ 2026

545 ಪಿಎಸ್ ಐ ಹುದ್ದೆಗಳ ನೇಮಕಾತಿಗೆ ತಡೆ | ಅಭ್ಯರ್ಥಿಗಳ ನೇಮಕಾತಿಯಲ್ಲಿ ಅಕ್ರಮ |

ಬೆಂಗಳೂರು : ರಾಜ್ಯ ಪೊಲೀಸ್ ಇಲಾಖೆಯಲ್ಲಿ 545 ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂದು ನೇಮಕಾತಿ ಪ್ರಕ್ರಿಯೆಯನ್ನು ತಡೆಹಿಡಿಯಲಾಗಿದೆ.

ಸಿವಿಲ್ ಪಿಎಸ್ ಐ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆಯನ್ನು ಕೈಗೊಂಡು ಅರ್ಹ ಅಭ್ಯರ್ಥಿಗಳ ಘಟಕವಾರು ತಾತ್ಕಾಲಿಕ ಪಟ್ಟಿಯನ್ನು ಈಗಾಗಲೇ ಪ್ರಕಟಿಸಲಾಗಿತ್ತು.

545 ಪಿಎಸ್ ಐ ಹುದ್ದೆಗಳ ನೇಮಕಕ್ಕೆ ಸರಕಾರ ಆದೇಶ ಹೊರಡಿಸಿತ್ತು. ಆದರೆ ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಜನರಿಗೆ 371 ( ಜೆ) ಮೀಸಲಾತಿಯಲ್ಲಿ ಅಕ್ರಮ ನಡೆದಿದೆ ಎಂದು ಕೆಲ ಅಭ್ಯರ್ಥಿಗಳು ಆರೋಪಿಸಿದ್ದರು.

ಈ ಸಂಬಂಧ ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿ ಅಮ್ರಿತ್ ಪಾಲ್ ಅವರು ರಾಜ್ಯದ ಹಿರಿಯ ಅಧಿಕಾರಿಗಳಿಗೆ ತುರ್ತು ಸಂದೇಶ ಕಳುಹಿಸಿದ್ದಾರೆ.

ಆಡಳಿತಾತ್ಮಕ ಕಾರಣದಿಂದ ನೇಮಕಾತಿ ಪ್ರಕ್ರಿಯೆಯನ್ನು ಮುಂದಿನ ಆದೇಶದವರೆಗೆ ಸ್ಥಗಿತಗೊಳಿಸಲು ನಿರ್ದೇಶಿಸಲಾಗಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ