# ಪೊಲೀಸ್ ಇಲಾಖೆ ಮಹತ್ವದ ಮಾಹಿತಿ|ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಅ.24 ರಂದು ಲಿಖಿತ ಪರೀಕ್ಷೆ

- Link: https://hosakannada.com/jobs/civil-police-constable-exam/
- Published: 2021-10-14T09:18:59+00:00
- Author: ಹೊಸಕನ್ನಡ ನ್ಯೂಸ್

ಬೆಂಗಳೂರು : ಸಿವಿಲ್ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ
ಅಕ್ಟೋಬರ್ 24 ರಂದು ಸಿವಿಲ್ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿಗೆ ಲಿಖಿತ ಪರೀಕ್ಷೆ ನಡೆಯಲಿದೆ
ಎಂದು ಪೊಲೀಸ್ ಇಲಾಖೆ ತಿಳಿಸಿದೆ.

Sponsored

ಸಿವಿಲ್ ಪೊಲೀಸ್ ಕಾನ್ಸ್ ಟೇಬಲ್ ಪುರುಷ ಮತ್ತು ಮಹಿಳೆ ಹುದ್ದೆಗಳ ಪರೀಕ್ಷೆ ಇದ್ದು,ಒಟ್ಟು 3,533 
ಸಿವಿಲ್ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿಗೆ 43,800 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು,
ಅಕ್ಟೋಬರ್ 24 ರ ಮಧ್ಯಾಹ್ನ 12 ಗಂಟೆಯಿಂದ 1.30 ರವರೆಗೆ ಲಿಖಿತ ಪರೀಕ್ಷೆ ನಡೆಯಲಿದೆ.

Advertisement

Advertisement

ಸಿವಿಲ್ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಪ್ರವೇಶ ಪತ್ರವನ್ನು
ವೆಬ್ ಸೈಟ್ ನಲ್ಲಿ ಡೌನ್ ಲೋಡ್ ಮಾಡಿಕೊಂಡು ಪರೀಕ್ಷೆಗೆ ಹಾಜರಾಗುವಂತೆ ಇಲಾಖೆ ಮಾಹಿತಿ ನೀಡಿದೆ.

ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಇಲಾಖೆಯ ವೆಬ್ ಸೈಟ್ www.recruiitment.ksp.gov.in ಗೆ ಭೇಟಿ
ನೀಡಬಹುದು.

Advertisement
