Home Jobs ESIC Karnataka: ನೌಕರರ ರಾಜ್ಯ ವಿಮಾ ನಿಗಮದಲ್ಲಿ ಕೆಲಸ ಖಾಲಿ ಇದೆ- ತಿಂಗಳ ವೇತನ 67,000

ESIC Karnataka: ನೌಕರರ ರಾಜ್ಯ ವಿಮಾ ನಿಗಮದಲ್ಲಿ ಕೆಲಸ ಖಾಲಿ ಇದೆ- ತಿಂಗಳ ವೇತನ 67,000

Hindu neighbor gifts plot of land

Hindu neighbour gifts land to Muslim journalist

ನೌಕರರ ರಾಜ್ಯ ವಿಮಾ ನಿಗಮ ಕರ್ನಾಟಕ(Employees State Insurance Corporation Karnataka) ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು. ಬೆಂಗಳೂರಿನಲ್ಲಿ (Bengaluru) ಕೆಲಸ ಹುಡುಕುತ್ತಿರುವ ಉದ್ಯೋಗಾಂಕ್ಷಿಗಳಿಗೆ ಇದೊಂದು ಸುವರ್ಣಾವಕಾಶವಾಗಿದೆ. ಇದೇ ಡಿಸೆಂಬರ್ 27, 2022 ರಂದು ಸಂದರ್ಶನ(Interview) ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಿ.

ಪ್ರಮುಖ ದಿನಾಂಕಗಳು:
ನೋಟಿಫಿಕೇಶನ್ ಬಿಡುಗಡೆ ದಿನಾಂಕ: 15/12/2022
ಸಂದರ್ಶನ ನಡೆಯುವ ದಿನಾಂಕ: 27/12/2022

ಸಂಸ್ಥೆ : ನೌಕರರ ರಾಜ್ಯ ವಿಮಾ ನಿಗಮ ಕರ್ನಾಟಕ
ಹುದ್ದೆ : ಸೀನಿಯರ್ ರೆಸಿಡೆಂಟ್
ಒಟ್ಟು ಹುದ್ದೆ : 7
ವೇತನ : ತಿಂಗಳಿಗೆ 67,700
ಉದ್ಯೋಗದ ಸ್ಥಳ : ಬೆಂಗಳೂರು

ವಿದ್ಯಾರ್ಹತೆ: ನೌಕರರ ರಾಜ್ಯ ವಿಮಾ ನಿಗಮ ಕರ್ನಾಟಕ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಂಡಿ, ಡಿಎನ್​ಬಿ, ಎಂಎಸ್ಸಿ, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.

ವೇತನ : ನೌಕರರ ರಾಜ್ಯ ವಿಮಾ ನಿಗಮ ಕರ್ನಾಟಕ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತಿಂಗಳಿಗೆ 67,700 ರೂ. ವೇತನ ನೀಡಲಾಗುತ್ತದೆ.

ವಯೋಮಿತಿ: ನೌಕರರ ರಾಜ್ಯ ವಿಮಾ ನಿಗಮ ಕರ್ನಾಟಕ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಡಿಸೆಂಬರ್ 27, 2022ಕ್ಕೆ ಗರಿಷ್ಠ 45 ವರ್ಷ ಮೀರಿರಬಾರದು.

ಆಯ್ಕೆ ಪ್ರಕ್ರಿಯೆ : ಈ ಹುದ್ದೆಗೆ ಅರ್ಜಿ ಸಲ್ಲಿಸಲು ಲಿಖಿತ ಪರೀಕ್ಷೆ, ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಸಂದರ್ಶನ ನಡೆಯುವ ಸ್ಥಳ : ಅಕಾಡೆಮಿಕ್ ಬ್ಲಾಕ್, ESIC PGIMSR, ರಾಜಾಜಿನಗರ, ಬೆಂಗಳೂರು- 560010