Home Education Teacher Job: ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ ; ಆಸಕ್ತರು ಕೂಡಲೇ...

Teacher Job: ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ ; ಆಸಕ್ತರು ಕೂಡಲೇ ಅರ್ಜಿ ಸಲ್ಲಿಸಿ!

Teacher job
Image Source: Malayalam news

Hindu neighbor gifts plot of land

Hindu neighbour gifts land to Muslim journalist

Teacher Job: ಅದೆಷ್ಟೋ ಜನರು ಶಿಕ್ಷಕರಾಗಿ ಮಕ್ಕಳಿಗೆ ಶಿಕ್ಷಣ ನೀಡಲು ಕನಸು ಹೊತ್ತಿರುತ್ತಾರೆ. ಇನ್ನೊಂದೆಡೆ ಶಿಕ್ಷಕರ ಸಂಖ್ಯೆಯೂ ಕಡಿಮೆ ಆಗುತ್ತಿದೆ. ಮಕ್ಕಳ ಭವಿಷ್ಯ ರೂಪಿಸುವ ಶಿಕ್ಷಣದ ವೃತ್ತಿಗಾಗಿ ಹುಡುಕಾಟದಲ್ಲಿದ್ದವರಿಗೆ ಸಿಹಿಸುದ್ದಿ ಇಲ್ಲಿದೆ. ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ಹುದ್ದೆಗೆ (Teacher Job) ಅರ್ಜಿ ಆಹ್ವಾನಿಸಲಾಗಿದೆ.

ಹೌದು, 2023-24 ನೇ ಸಾಲಿನಲ್ಲಿ ಶಿವಮೊಗ್ಗ (shivamogga) ಜಿಲ್ಲೆಯ 7 ತಾಲೂಕುಗಳಲ್ಲಿ ಸಮನ್ವಯ ಶಿಕ್ಷಣ ಮಧ್ಯವರ್ತನೆಯಡಿಯಲ್ಲಿ 2 ರಿಂದ 5 ನೇ ತರಗತಿ ಹಾಗೂ 7 ರಿಂದ 12 ನೇ ತರಗತಿಗಳಿಗೆ ಶಿಕ್ಷಕರ ಹುದ್ದೆ ಖಾಲಿ ಇದ್ದು, ಅರ್ಜಿ ಆಹ್ವಾನಿಸಲಾಗಿದೆ. ನೇರಗುತ್ತಿಗೆ ಆಧಾರದ ಮೇಲೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.‌

ಪ್ರಮುಖ ದಿನಾಂಕ:
ಅರ್ಜಿ ಸಲ್ಲಿ‌ಸಲು ಕೊನೆಯ ದಿನಾಂಕ: ಜೂ.19 2023

ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು ಅರ್ಜಿಯಲ್ಲಿ ಕಡ್ಡಾಯವಾಗಿ ಮೊಬೈಲ್ ಸಂಖ್ಯೆ ನಮೂದಿಸಬೇಕು. ನಂತರ ಭರ್ತಿ ಮಾಡಿದ ಅರ್ಜಿಯನ್ನು ದಾಖಲೆಯೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.

ವಿಳಾಸ: ಉಪನಿರ್ದೇಶಕರು (ಆಡಳಿತ) ಹಾಗೂ ಪದನಿಮಿತ್ತ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿಗಳ ಕಚೇರಿ ಶಿವಮೊಗ್ಗ.

ಇದನ್ನೂ ಓದಿ: ಸಮಾಜದಲ್ಲಿ ಗೌರವ ಪ್ರತಿಷ್ಠೆಗಳು ಹೆಚ್ಚಾಗಲಿದೆ ಈ ರಾಶಿಯವರಿಗೆ!