Home Jobs SSC Delhi Police Constable Recruitment 2023: ಪೊಲೀಸ್‌ ಕಾನ್ಸ್‌ಟೇಬಲ್‌ಗಳ ನೇಮಕಾತಿ; ಭರ್ಜರಿ 7547 ಹುದ್ದೆಗಳು...

SSC Delhi Police Constable Recruitment 2023: ಪೊಲೀಸ್‌ ಕಾನ್ಸ್‌ಟೇಬಲ್‌ಗಳ ನೇಮಕಾತಿ; ಭರ್ಜರಿ 7547 ಹುದ್ದೆಗಳು ಖಾಲಿ; 12 ನೇ ತರಗತಿ ಪಾಸಾದವರಿಗೆ ಆದ್ಯತೆ, ಮಾಸಿಕ 69 ಸಾವಿರ ಸಂಬಳ!!!

Hindu neighbor gifts plot of land

Hindu neighbour gifts land to Muslim journalist

ದೆಹಲಿ ಪೊಲೀಸ್‌ನಲ್ಲಿ ಕಾನ್ಸ್‌ಟೇಬಲ್‌ಗಳ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಸ್ಟಾಫ್‌ ಸೆಲೆಕ್ಷನ್‌ ಕಮಿಷನ್‌, ಎಸ್‌ಎಸ್‌ಸಿ ದೆಹಲಿ ಪೊಲೀಸ್‌ನಲ್ಲಿ ಒಟ್ಟು 7547 ಕಾನ್‌ಸ್ಟೇಬಲ್‌ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಸೆಪ್ಟೆಂಬರ್‌ 1ರಿಂದ ಆನ್‌ಲೈನ್‌ ಅರ್ಜಿ ಪ್ರಕ್ರಿಯೆ ಆರಂಭವಾಗಿದೆ. ಅಭ್ಯರ್ಥಿಗಳಿಗೆ ಸೆ.30 ರೊಳಗೆ ssc.nic.in ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ. ಅಕ್ಟೋಬರ್‌ 3 ರಿಂದ 4 ರವರೆಗೆ ಅರ್ಜಿ ನಮೂನೆಗಳನ್ನು ತಿದ್ದುಪಡಿ ಮಾಡಲು ಅವಕಾಶವಿದೆ.

ವಿದ್ಯಾರ್ಹತೆ: 12 ನೇ ತರಗತಿ ಪಾಸ್‌ ಆದ ಅಭ್ಯರ್ಥಿಗಳು ಪೊಲೀಸ್‌ ಕಾನ್ಸ್ಟೇಬಲ್‌ ನೇಮಕಾತಿಗೆ ಅರ್ಜಿ ಸಲ್ಲಿಸಲು ಅರ್ಹರು.
ವಯೋಮಿತಿ: ಅಭ್ಯರ್ಥಿಗಳ ವಯಸ್ಸು 18 ರಿಂದ 25 ವರ್ಷದೊಳಗಿರಬೇಕು. ಅಭ್ಯರ್ಥಿಯು ಜುಲೈ 2, 1998 ರಿಂದ ಜುಲೈ 1, 2005 ರ ನಡುವೆ ಜನಿಸಿರಬೇಕು. ಮೀಸಲಾತಿ ವರ್ಗದ ಅಭ್ಯರ್ಥಿಗಳಿಗೆ ನಿಯಮಾನುಸಾರ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ: ಕಂಪ್ಯೂಟರ್ ಆಧಾರಿತ ಪರೀಕ್ಷೆ, ದೈಹಿಕ ಸಾಮರ್ಥ್ಯ ಮತ್ತು ಪ್ರಮಾಣಿತ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆಯ ಮೂಲಕ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
ವೇತನ: ಆಯ್ಕೆಯಾದ ಅಭ್ಯರ್ಥಿಗಳಿಗೆ ವೇತನ ಮಟ್ಟ 3 ರ ಅಡಿಯಲ್ಲಿ ರೂ 21700 ರಿಂದ ರೂ 69100 ರವರೆಗಿನ ಮಾಸಿಕ ವೇತನವನ್ನು ನೀಡಲಾಗುತ್ತದೆ.