Home Jobs KEA Recruitment Notification: ಕಲ್ಯಾಣ ಕರ್ನಾಟಕದಲ್ಲಿ ಕಂಡಕ್ಟರ್‌, FDA/SDA ಸೇರಿ 320ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿ

KEA Recruitment Notification: ಕಲ್ಯಾಣ ಕರ್ನಾಟಕದಲ್ಲಿ ಕಂಡಕ್ಟರ್‌, FDA/SDA ಸೇರಿ 320ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿ

Government Jobs

Hindu neighbor gifts plot of land

Hindu neighbour gifts land to Muslim journalist

KEA: ಕಲ್ಯಾಣ ಕರ್ನಾಟಕ ಭಾಗದ ಅಭ್ಯರ್ಥಿಗಳಿಗೆ ರಾಜ್ಯ ಸರಕಾರವು ಬಂಪರ್‌ ಉದ್ಯೋಗಾವಕಾಶವನ್ನು ನೀಡಿದೆ. ಕರ್ನಾಟಕ ಸರಕಾರದ ಅಧೀನದಲ್ಲಿರುವ ಐದು ಪ್ರಮುಖ ಸಂಸ್ಥೆಗಳು ಮತ್ತು ನಿಗಮಗಳಲ್ಲಿನ ವಿವಿಧ ವೃಂದದ 320ಕ್ಕೂ ಹೆಚ್ಚು ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಕೆಇಎ ಅಧಿಸೂಚನೆಯನ್ನು ಹೊರಡಿಸಿದೆ. ಕಲ್ಯಾಣ ಕರ್ನಾಟಕ ವೃಂದದಡಿ ನೇರ ನೇಮಕಾತಿ ಮೂಲಕ ಮಾಡಲಾಗುತ್ತಿದೆ.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA), ಕರ್ನಾಟಕ ಸೋಪ್ಸ್‌ ಆ್ಯಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ (KSDL), ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ (RGUHS), ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (KKRTC) ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಇಲ್ಲಿ ಅರ್ಜಿಗಲನ್ನು ಆಹ್ವಾನಿಸಲಾಗಿದೆ.

KKRTC 253 ಹುದ್ದೆಗಳು: ಇದರಲ್ಲಿ 240 ನಿರ್ವಾಹಕ (Conductor) ಹುದ್ದೆಗಳು ಮತ್ತು 13 ಸಹಾಯಕ ಲೆಕ್ಕಿಗ ಹುದ್ದೆಗಳು ಸೇರಿವೆ. ನಿರ್ವಾಹಕ ಹುದ್ದೆಗೆ ಪಿಯುಸಿ (PUC) ಅಥವಾ ತತ್ಸಮಾನ ವಿದ್ಯಾರ್ಹತೆ ಜೊತೆಗೆ ಮಾನ್ಯತೆ ಪಡೆದ ಮೋಟಾರು ವಾಹನ ಕಂಡಕ್ಟರ್ ಪರವಾನಗಿ ಮತ್ತು ಬ್ಯಾಡ್ಜ್ ಕಡ್ಡಾಯ.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA): ಪ್ರಥಮ ದರ್ಜೆ ಸಹಾಯಕರು (FDA) (ಪದವಿ) 1 ಹುದ್ದೆ ಮತ್ತು ದ್ವಿತೀಯ ದರ್ಜೆ ಸಹಾಯಕರು (SDA) (ಪಿಯುಸಿ ಅಥವಾ ತತ್ಸಮಾನ) 6 ಹುದ್ದೆಗಳು.

ತಾಂತ್ರಿಕ ಶಿಕ್ಷಣ ಇಲಾಖೆ: ಪ್ರಥಮ ದರ್ಜೆ ಸಹಾಯಕರು (FDA) 16 ಹುದ್ದೆಗಳು ಮತ್ತು ದ್ವಿತೀಯ ದರ್ಜೆ ಸಹಾಯಕರು (SDA) 23 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಇತರೆ ಹುದ್ದೆಗಳು: ಕೆಎಸ್‌ಡಿಎಲ್‌ನಲ್ಲಿ 14 ಹುದ್ದೆಗಳು (ಮಾರುಕಟ್ಟೆ ಕಿರಿಯ ಅಧಿಕಾರಿ-1, ಮಾರಾಟ ಪ್ರತಿನಿಧಿ-04, ಆಪರೇಟರ್-09) ಲಭ್ಯವಿದೆ. ಇನ್ನು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿದ್ಯಾಲಯ (ಆರ್‌ಜಿಎಚ್‌ಎಸ್‌ಯು)ನಲ್ಲಿ 4 ಹುದ್ದೆಗಳು (ಜೂನಿಯರ್ ಪ್ರೋಗ್ರಾಮರ್-1, ಸಹಾಯಕ-1, ಕಿರಿಯ ಸಹಾಯಕ-2)

ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ ಅಕ್ಟೋಬರ್‌ 9,2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ನವೆಂಬರ್‌ 10,2025
ಶುಲ್ಕ ಪಾವತಿಗೆ ಕೊನೆಯ ದಿನಾಂಕ ನವೆಂಬರ್‌,11,2025

ಅರ್ಜಿ ಶುಲ್ಕ: ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ₹750/- ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ ₹500/- .ವಿಶೇಷ ಚೇತನರಿಗೆ 250 ರೂ. ನಿಗದಿಪಡಿಸಲಾಗಿದೆ. ಒಂದಕ್ಕಿಂತ ಹೆಚ್ಚು ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದಾದರೆ, ಪ್ರತಿ ಹೆಚ್ಚುವರಿ ಹುದ್ದೆಗೆ ₹100/- ಅರ್ಜಿ ಶುಲ್ಕ ಹೆಚ್ಚುವರಿಯಾಗಿ ಪಾವತಿ ಮಾಡಬೇಕು.

ವಯೋಮಿತಿ: ಕನಿಷ್ಠ 18 ವರ್ಷ ವಯಸ್ಸಾಗಿರಬೇಕು. ಗರಿಷ್ಠ ವಯೋಮಿತಿ ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ 38 ವರ್ಷಗಳು, ಪ್ರವರ್ಗ 2ಎ, 2ಬಿ, 3ಎ, 3ಬಿ ವರ್ಗಗಳಿಗೆ 41 ವರ್ಷಗಳಾಗಿವೆ. ಹಾಗೂ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1 ಅಭ್ಯರ್ಥಿಗಳಿಗೆ 43 ವರ್ಷಗಳವರೆಗೆ ಇರುತ್ತದೆ.

ಆಯ್ಕೆಯು ಆಫ್‌ಲೈನ್ OMR ಮಾದರಿಯ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ನಡೆಯುತ್ತದೆ. ಅರ್ಹತೆಗಾಗಿ ಅಭ್ಯರ್ಥಿಗಳು ಒಟ್ಟು ಅಂಕಗಳಲ್ಲಿ ಕನಿಷ್ಠ ಶೇಕಡಾ 35 ರಷ್ಟು (ಕೆಕೆಆರ್‌ಟಿಸಿ ಹುದ್ದೆಗಳಿಗೆ ಶೇಕಡಾ 30) ಅಂಕಗಳನ್ನು ಗಳಿಸುವುದು ಕಡ್ಡಾಯ. ಪ್ರತಿ ತಪ್ಪು ಉತ್ತರಕ್ಕೆ ನಾಲ್ಕನೇ ಒಂದಂಶ (1/4) ಋಣಾತ್ಮಕ ಮೌಲ್ಯಮಾಪನ (Negative Marking) ಇರುತ್ತದೆ. ಅರ್ಜಿ ಸಲ್ಲಿಸಲು ಮತ್ತು ಹೆಚ್ಚಿನ ವಿವರಗಳಿಗಾಗಿ ಅಭ್ಯರ್ಥಿಗಳು ಕೆಇಎಯ ಅಧಿಕೃತ ವೆಬ್‌ಸೈಟ್ (https://cetonline.karnataka.gov.in/VAOResult/DigilockerReg.aspx) ಗೆ ಭೇಟಿ ನೀಡಬಹುದಾಗಿದೆ.