Home Interesting ಖೇಲೋ ಇಂಡಿಯಾ ಕೇಂದ್ರದಲ್ಲಿ ಅಥ್ಲೆಟಿಕ್ ತರಬೇತುದಾರ ಹುದ್ದೆಗೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಸಲು ಮಾರ್ಚ್...

ಖೇಲೋ ಇಂಡಿಯಾ ಕೇಂದ್ರದಲ್ಲಿ ಅಥ್ಲೆಟಿಕ್ ತರಬೇತುದಾರ ಹುದ್ದೆಗೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಸಲು ಮಾರ್ಚ್ 2 ಕೊನೆದಿನ

Hindu neighbor gifts plot of land

Hindu neighbour gifts land to Muslim journalist

ಭಾರತ ಸರ್ಕಾರವು ಖೇಲೋ ಇಂಡಿಯಾ ಯೋಜನೆಯಡಿ ಅಥ್ಲೆಟಿಕ್ ಕ್ರೀಡೆಯಲ್ಲಿ ಖೇಲೋ ಇಂಡಿಯಾ ಕೇಂದ್ರವನ್ನು ಧಾರವಾಡ ಜಿಲ್ಲೆಯಲ್ಲಿ ಪ್ರಾರಂಭಿಸಲು ಉದ್ದೇಶಿಸಿದ್ದು, ಈ ಕೇಂದ್ರಕ್ಕೆ ತಾತ್ಕಾಲಿಕವಾಗಿ ಓರ್ವ ಅಥ್ಲೆಟಿಕ್ ತರಬೇತುದಾರರನ್ನು ನೇಮಿಸಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.

ಕರ್ನಾಟಕ ಅಥ್ಲೆಟಿಕ್ ಅಸೋಸಿಯೇಷನ್ ನಡೆಸಿದ ಅಂತಾರಾಷ್ಟ್ರೀಯ, ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಭಾಗವಹಿಸಿ ಪದಕ ವಿಜೇತ ಅಥವಾ ವಿಶ್ವವಿದ್ಯಾನಿಲಯದವರು ನಡೆಸಿದ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಪ್ರಶಸ್ತಿ ಪಡೆದ 40 ವರ್ಷದೊಳಗಿನ ಕ್ರೀಡಾಪಟುಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಕ್ರೀಡಾಪಟುಗಳು ತಮ್ಮ ವೈಯಕ್ತಿಕ ವಿವರ ಮತ್ತು ಪ್ರಮಾಣ ಪತ್ರದೊಂದಿಗೆ ಅರ್ಜಿಯನ್ನು ಒಂದು ಸಾವಿರ ರೂ.ಗಳ ಡಿಡಿಯನ್ನು ಕರ್ನಾಟಕ ಅಥ್ಲೆಟಿಕ್ ಅಸೋಸಿಯೇಷನ್ ಇವರ ಹೆಸರಿಗೆ ತೆಗೆದು ಅರ್ಜಿಯೊಂದಿಗೆ ಲಗತ್ತಿಸಿ ಮಾರ್ಚ್ 2 ರೊಳಗಾಗಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಆರ್.ಎನ್.ಶೆಟ್ಟಿ ಕ್ರೀಡಾಂಗಣ, ಧಾರವಾಡ. ದೂರವಾಣಿ ಸಂಖ್ಯೆ: 0836-2447424 ಸಂಪರ್ಕಿಸಬೇಕೆಂದು ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.