Home Jobs KPSC ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ  |

KPSC ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ  |

Hindu neighbor gifts plot of land

Hindu neighbour gifts land to Muslim journalist

ಕರ್ನಾಟಕ ಲೋಕಸೇವಾ ಆಯೋಗ ಕರೆಯಲಾಗಿದ್ದಂತ ವಿವಿಧ ಹುದ್ದೆಗಳ ನೇಮಕಾತಿಯ ಸ್ಪರ್ಧಾತ್ಮಕ ಪರೀಕ್ಷೆಯ ಬಳಿಕ ಇದೀಗ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಲು ವೇಳಾಪಟ್ಟಿಯನ್ನು ಘೋಷಣೆ ಮಾಡಲಾಗಿದೆ. ಈ ಕುರಿತಂತೆ ಕೆಪಿಎಸ್ಸಿಯ ಕಾರ್ಯದರ್ಶಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಆಯೋಗದ ವತಿಯಿಂದ ನಡೆಸಲಾಗುತ್ತಿರುವ ವಿವಿಧ ನೇಮಕಾತಿಗಳಿಗೆ ಸಂಬಂಧಿಸಿದಂತೆ, ಅರ್ಹತಾ ಪಟ್ಟಿ ಪ್ರಕಟಿಸಲು, ಈ ಕೆಳಕಂಡಂತೆ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ತಿಳಿಸಿದ್ದಾರೆ.

ಲೋಕೋಪಯೋಗಿ ಇಲಾಖೆಯಲ್ಲಿನ ಸಹಾಯಕ ಇಂಜಿನಿಯರ್ – 660 ಹುದ್ದೆ – ತಾತ್ಕಾಲಿಕ ಅರ್ಹತಾ ಪಟ್ಟಿ 23-09-2022ರಂದು ಪ್ರಕಟ

330 ಲೋಕೋಪಯೋಗಿ ಇಲಾಖೆಯಲ್ಲಿನ ಕಿರಿಯ ಇಂಜಿನಿಯರ್ ಹುದ್ದೆ – 15-09-2022ರಂದು ಪ್ರಕಟ

ಸರ್ಕಾರದ ಸಚಿವಾಲಯ ಸಂಸದೀಯ ವ್ಯವಹಾರಗಳ ಇಲಾಖೆಯಲ್ಲಿನ ಪ್ರಾರೂಪಣಾ ಸಹಾಯಕರ 03 ಹುದ್ದೆಗಳ ತಾತ್ಕಾಲಿಕ ಪಟ್ಟಿ 31-10 -2022ರಂದು ಪ್ರಕಟ

ಕಾರ್ಮಿಕ ಇಲಾಖೆಯಲ್ಲಿನ ಕಾರ್ಮಿಕ ನಿರೀಕ್ಷಕರ 26 ಹುದ್ದೆಗಳ ತಾತ್ಕಾಲಿಕ ಅರ್ಹತಾ ಪಟ್ಟಿ ದಿನಾಂಕ 31-10-2022 ರಂದು ಪ್ರಕಟ

ಪೌರಾಡಳಿತ ನಿರ್ದೇಶನಾಲಯದಲ್ಲಿನ ಅಕೌಂಟೆಂಟ್ 21 ಹುದ್ದೆಗಳ ಪಟ್ಟಿ 31-10 2022ಬರಂದು ಪ್ರಕಟ

ಕರ್ನಾಟಕ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿನ ಲೆಕ್ಕ ಸಹಾಯಕ 72 ಹುದ್ದೆಗಳ ಪಟ್ಟಿ 31-10-2022ರಂದು ಪ್ರಕಟ

ಸಹಕಾರ ಸಂಘಗಳ ಲೆಕ್ಕ ಪರಿಶೋಧನಾ ಇಲಾಖೆಯಲ್ಲಿನ ಲೆಕ್ಕಪರಿಶೋಧಕ 20 ಹುದ್ದೆಗಳ ಪಟ್ಟಿ 31-10-2022ರಂದು ಪ್ರಕಟ

ಪೌರಾಡಳಿತ ನಿರ್ದೇಶನಾಲಯದಲ್ಲಿನ ಪ್ರಥಮ ದರ್ಜೆ ಕಂದಾಯ ನಿರೀಕ್ಷಕ 66 ಹುದ್ದೆಗಳ ಪಟ್ಟಿ 31-10-2022ರಂದು ಪ್ರಕಟ

ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ

ನೋಟಿಫಿಕೇಶನ್ ಈ ಕೆಳಗೆ ನೀಡಲಾಗಿದೆ