Home Jobs ಅರೆ ಕಾನೂನು ಸ್ವಯಂಸೇವಕರಾಗಿ ಕಾರ್ಯನಿರ್ವಹಿಸಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ !! | ಈ ಹುದ್ದೆಗೆ...

ಅರೆ ಕಾನೂನು ಸ್ವಯಂಸೇವಕರಾಗಿ ಕಾರ್ಯನಿರ್ವಹಿಸಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ !! | ಈ ಹುದ್ದೆಗೆ ಬೇಕಾದ ಅರ್ಹತೆಗಳ ಕುರಿತು ಇಲ್ಲಿದೆ ಮಾಹಿತಿ

Hindu neighbor gifts plot of land

Hindu neighbour gifts land to Muslim journalist

ಧಾರವಾಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕಲಘಟಗಿ ಕುಂದಗೋಳ ಹಾಗೂ ನವಲಗುಂದ, ಹುಬ್ಬಳ್ಳಿ ತಾಲೂಕುಗಳಲ್ಲಿ ಅರೆ ಕಾನೂನು ಸ್ವಯಂ ಸೇವಕರಾಗಿ ಕಾರ್ಯನಿರ್ವಹಿಸಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರೆ ಕಾನೂನು ಸ್ವಯಂ ಸೇವಕ ಹುದ್ದೆಗೆ ಇರುವ ಅರ್ಹತೆಗಳು

*ವೈದ್ಯಕೀಯ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವವರು
*ಉನ್ನತ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳು
*ಶಿಕ್ಷಣ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರು, ಪ್ರಾಧ್ಯಾಪಕರು
*ಕಾನೂನು ಮಹಾವಿದ್ಯಾಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು
*ಆಶಾ, ಅಂಗನವಾಡಿ ಕಾರ್ಯಕರ್ತೆಯರು, ವಿವಿಧ ಸರ್ಕಾರಿ ಕಛೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವವರು
*ನಿವೃತ್ತ ಸರ್ಕಾರಿ ನೌಕರರು, ವಿವಿಧ ಸಂಘಟನೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಾಮಾಜಿಕ ಸೇವಾ ಮನೋಭಾವ ಹೊಂದಿರುವ ಪುರುಷ ಮತ್ತು ಮಹಿಳೆಯರು, ಮಂಗಳಮುಖಿಯರು, ಸನ್ನಡತೆ ಹೊಂದಿದ ಕಾರಾಗೃಹ ಬಂಧಿಗಳು ಮತ್ತು ಸ್ವ-ಸಹಾಯ ಸಂಘಗಳ ಸದಸ್ಯರು ಅರ್ಜಿ ಸಲ್ಲಿಸಬಹುದಾಗಿದೆ.

ಇದೇ ಮಾರ್ಚ್ 15 ರೊಳಗಾಗಿ ಅಭ್ಯರ್ಥಿಗಳು ನ್ಯಾಯಾಲಯಗಳ ಆವರಣದಲ್ಲಿರುವ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲೂಕು ಕಾನೂನು ಸೇವಾ ಸಮಿತಿಗಳಲ್ಲಿ ನಿಗದಿತ ಅರ್ಜಿ ನಮೂನೆಯನ್ನು ಪಡೆದುಕೊಂಡು ಸಲ್ಲಿಸಬೇಕಾಗಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.