Home Jobs ಮಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ | ಜ.12ರಂದು ನೇರ ಸಂದರ್ಶನ, ಹೆಚ್ಚಿನ ವಿವರ ಇಲ್ಲಿದೆ

ಮಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ | ಜ.12ರಂದು ನೇರ ಸಂದರ್ಶನ, ಹೆಚ್ಚಿನ ವಿವರ ಇಲ್ಲಿದೆ

Hindu neighbor gifts plot of land

Hindu neighbour gifts land to Muslim journalist

ಲಾಲ್‌ಬಾಗ್‌ನಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಜ. 12ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 1.30ರ ವರೆಗೆ ಪ್ಲಿಪ್‌ಕಾರ್ಟ್ ವತಿಯಿಂದ ನೇರ ಸಂದರ್ಶನ ಆಯೋಜಿಸಲಾಗಿದೆ.

ದಕ್ಷಿಣ ಕನ್ನಡ, ಉಡುಪಿ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಫೀಲ್ಡ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಎಸೆಸೆಲ್ಸಿ ಹಾಗೂ ಮೇಲ್ಪಟ್ಟ ವಿದ್ಯಾರ್ಹತೆ ಹೊಂದಿರುವ ಪುರುಷರು ಬಯೋಡೇಟಾದೊಂದಿಗೆ ನೇರ ಸಂದರ್ಶನದಲ್ಲಿ ಹಾಜರಾಗಬಹುದು. ಅಭ್ಯರ್ಥಿಗಳು ಮೊಬೈಲ್ ಫೋನ್, ದ್ವಿಚಕ್ರ ವಾಹನ, ಚಾಲನ ಪರವಾನಿಗೆ ಹೊಂದಿರುವುದು ಕಡ್ಡಾಯ ಎಂದು ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.