# ರಾಜ್ಯ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಭರ್ತಿಗೆ ಅರ್ಹರಿಂದ ಅರ್ಜಿ ಆಹ್ವಾನ!! ಅರ್ಜಿ ಸಲ್ಲಿಸಲು ಏಪ್ರಿಲ್ 30 ಕೊನೆಯ ದಿನ

- Link: https://hosakannada.com/jobs/police-job-in-karnataka/
- Published: 2022-03-11T15:59:08+00:00
- Author: ಹೊಸಕನ್ನಡ ನ್ಯೂಸ್

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸುಮಾರು 1500 ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ 
ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಈ ಬಗ್ಗೆ ಹೆಚ್ಚಿನ ಮಾಹಿತಿ
ಬಿಡುಗಡೆ ಆಗಬೇಕಿದ್ದು ಏಪ್ರಿಲ್ 1 ರಿಂದಲೇ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

Sponsored

ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ತೆರಲು ಅವಕಾಶವಿಲ್ಲ. ಆನ್ಲೈನ್ ಅರ್ಜಿ ಸಲ್ಲಿಸುವಾಗ ಇಮೇಲ್ 
ಐಡಿ, ಮೊಬೈಲ್ ಸಂಖ್ಯೆ, ಶೈಕ್ಷಣಿಕ ಅರ್ಹತ ಪಟ್ಟಿ ಮುಂತಾದ ದಾಖಲೆಗಳು ಅಗತ್ಯವಾಗಿದ್ದು, ಇತ್ತೀಚಿನ
ಭಾವಚಿತ್ರ ಸಹಿತ ಅರ್ಜಿ ಸಲ್ಲಿಸಲು ಕೋರಲಾಗಿದೆ.

Advertisement

Advertisement

ಲಿಖಿತ ಪರೀಕ್ಷೆ, ಸಹಿಷ್ಣುತೆ ಪರೀಕ್ಷೆ ಹಾಗೂ ದೈಹಿಕ ಪರೀಕ್ಷೆಗಳ ಮೂಲಕ ಅರ್ಹರನ್ನು ಆಯ್ಕೆ ಮಾಡಲಾಗುವುದು
ಎಂದು ಮೂಲಗಳು ತಿಳಿಸಿದ್ದು ಏಪ್ರಿಲ್ ಒಂದರಿಂದ ಅರ್ಜಿ ಸಲ್ಲಿಸಲು ಅವಕಾಶ ಹಾಗೂ ಏಪ್ರಿಲ್ 30 ಅರ್ಜಿ
ಸಲ್ಲಿಸಲು ಕೊನೆಯ ದಿನವಾಗಿದೆ.

**ಹೆಚ್ಚಿನ ಮಾಹಿತಿಗೆ ಭೇಟಿ ಕೊಡಿ: **http://rec21.ksp-online.in

Advertisement
