Home Jobs ಮಂಗಳೂರು :ಗ್ರಾಮೀಣ ಅಂಚೆ ಸೇವಕರ ಹುದ್ದೆಗೆ ಅರ್ಜಿ ಆಹ್ವಾನ

ಮಂಗಳೂರು :ಗ್ರಾಮೀಣ ಅಂಚೆ ಸೇವಕರ ಹುದ್ದೆಗೆ ಅರ್ಜಿ ಆಹ್ವಾನ

Hindu neighbor gifts plot of land

Hindu neighbour gifts land to Muslim journalist

Post office : ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಸಂಬಂಧಿಸಿ ದಂತೆ ಅಂಚೆ ಕಚೇರಿಯಲ್ಲಿ (Post office)ಖಾಲಿ ಇರುವ ಶಾಖಾ ಅಂಚೆ ಪಾಲಕ, ಸಹಾಯಕ ಶಾಖಾ ಅಂಚೆಪಾಲಕ ಮತ್ತು ಢಾಕ್ ಸೇವಕ್ ಹುದ್ದೆಗಳಿಗೆ ಆನ್ ಲೈನ್ ಮೂಲಕ ನೇಮಕಾತಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

 

ಆನ್ ಲೈನ್ (https://indiapostgdsonline.gov.in) ಮೂಲಕ ಅರ್ಜಿ ಸಲ್ಲಿಸಲು ಆ. 23 ಕೊನೆಯ ದಿನ. ಮಂಗಳೂರು ವಿಭಾಗದಲ್ಲಿ 52 ಹುದ್ದೆಗಳಿವೆ.

 

ಅಭ್ಯರ್ಥಿಗಳು ಆ. 23ಕ್ಕೆ ಅನ್ವಯವಾಗುವ ಹಾಗೆ 18ರಿಂದ 40 ವರ್ಷದೊಳ ಗಿನವರಾಗಿರಬೇಕು. ಅನುಸೂಚಿತ ಜಾತಿ ಮತ್ತು ಇತರ ವರ್ಗಗಳಿಗೆ 5 ವರ್ಷಗಳ ವಿನಾಯಿತಿ, ಒಬಿಸಿ ವರ್ಗದವರಿಗೆ 3 ವರ್ಷದ ವಿನಾಯಿತಿ ಇರುತ್ತದೆ. ಆರ್ಥಿಕವಾಗಿ ಹಿಂದುಳಿದ ವರ್ಗ ಇಡಬ್ಲ್ಯೂಎಸ್ ವರ್ಗದವರಿಗೆ ವಯೋಮಿತಿಯಲ್ಲಿ ಸಡಿಲಿಕೆ ಇರುವುದಿಲ್ಲ. ಅಂಗವಿಕಲರಿಗೆ 10 ವರ್ಷಗಳ ಸಡಿಲಿಕೆ. ಇತರ ಹಿಂದುಳಿದ ವರ್ಗಗಳಿಗೆ ಸಂಬಂಧಪಟ್ಟ ಅಂಗವಿಕಲರಿಗೆ ಒಟ್ಟು 13 ವರ್ಷ, ಪರಿಶಿಷ್ಟ ಜಾತಿ/ವರ್ಗಗಳ ಅಂಗವಿಕಲರಿಗೆ 15 ವರ್ಷಗಳ ಸಡಿಲಿಕೆ ಇರುತ್ತದೆ.

 

ಎಲ್ಲ ಹುದ್ದೆಗಳಿಗೆ 10ನೇ ತರಗತಿ ತೇರ್ಗಡೆ ಕಡ್ಡಾಯ. ಗಣಿತ ಮತ್ತು ಇಂಗ್ಲಿಷಿನಲ್ಲಿ ಕನಿಷ್ಠ ತೇರ್ಗಡೆ ಅಂಕ ಹೊಂದಿರಬೇಕು. ಕನ್ನಡವನ್ನು 10ನೇ ತರಗತಿಯಲ್ಲಿ ಒಂದು ಭಾಷೆಯಾಗಿ ಅಧ್ಯಯನ ಮಾಡಿರಬೇಕು. ಕಾಸರಗೋಡು ಜಿಲ್ಲೆಯಲ್ಲಿ ಕನ್ನಡ ಒಂದು ವಿಷಯವಾಗಿ ಅಧ್ಯಯನ ನಡೆಸಿದವರೂ ಅರ್ಜಿ ಸಲ್ಲಿಸಬಹುದಾಗಿದೆ. ಮಾಹಿತಿ https://indiapost.gov.in ಅಥವಾ https://indiapostgdsonline.gov.in ವೆಬ್‌ಸೈಟ್‌ನಲ್ಲಿ ಲಭ್ಯವಿದೆ.

ಇದನ್ನೂ ಓದಿ : 10 ರೂ. ಚಿಪ್ಸ್‌ ಕಳ್ಳತನ ಮಾಡಿದನೆಂದು 15 ವರ್ಷದ ಬಾಲಕನಿಗೆ ಥಳಿಸಿ ವಿವಸ್ತ್ರಗೊಳಿಸಿ ಮೆರವಣಿಗೆ