Home Jobs ಉದ್ಯೋಗಾಕಾಂಕ್ಷಿಗಳೇ ಗಮನಿಸಿ| RBI ನಿಂದ 950 ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಉದ್ಯೋಗಾಕಾಂಕ್ಷಿಗಳೇ ಗಮನಿಸಿ| RBI ನಿಂದ 950 ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

Hindu neighbor gifts plot of land

Hindu neighbour gifts land to Muslim journalist

ಭಾರತೀಯ ರಿಸರ್ವ್ ಬ್ಯಾಂಕ್ ಅಸಿಸ್ಟೆಂಟ್ ಹುದ್ದೆಗಳ ಭರ್ತಿಗೆ ನೋಟಿಫಿಕೇಶನ್ ಬಿಡುಗಡೆ ಮಾಡಿದೆ. ಆಸಕ್ತರು ಅರ್ಜಿಯನ್ನು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಯ ಹೆಸರು : ಅಸಿಸ್ಟೆಂಟ್
ಹುದ್ದೆಗಳ ಸಂಖ್ಯೆ : 950

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 17-02-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 08-03-2022
ಆಯ್ಕೆ ಪರೀಕ್ಷೆ ದಿನಾಂಕ : ಮಾರ್ಚ್ 26, 27, 2022

ವಿದ್ಯಾರ್ಹತೆ : ಕನಿಷ್ಠ ಶೇ.50 ಅಂಕಗಳೊಂದಿಗೆ ಪದವಿಯಲ್ಲಿ ತೇರ್ಗಡೆ ಆಗಿರಬೇಕು. ( ಎಸ್ ಸಿ, ಎಸ್ ಟಿ, ವಿಕಲಚೇತನ ಅಭ್ಯರ್ಥಿಗಳು ಜಸ್ಟ್ ಪಾಸ್ ಅಂಕಗಳನ್ನು ಪಡೆದಿದ್ದರೂ ಅರ್ಜಿ ಸಲ್ಲಿಸಲು ಅವಕಾಶವಿದೆ). ಯಾವ ಪ್ರಾದೇಶಿಕ ಕೇಂದ್ರದಲ್ಲಿ ನೇಮಕಾತಿ ಬಯಸುತ್ತಾರೋ, ಅಲ್ಲಿನ ಪ್ರಾದೇಶಿಕ ಭಾಷೆಯನ್ನು ಓದಲು, ಬರೆಯಲು, ಅರ್ಥಮಾಡಿಕೊಳ್ಳಲು ಮಾತನಾಡಲು ಗೊತ್ತಿರಬೇಕು.

ವಯೋಮಿತಿ : ಅಭ್ಯರ್ಥಿಗಳಿಗೆ ಕನಿಷ್ಠ 20 ವರ್ಷ, ಗರಿಷ್ಠ 28 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. ಎಸ್ ಸಿ/ ಎಸ್ ಟಿ ಅಭ್ಯರ್ಥಿಗಳಿಗೆ 5 ವರ್ಷ, ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷ, ವಿಕಲಚೇತನ ಅಭ್ಯರ್ಥಿಗಳಿಗರ 10 ವರ್ಷ ವಯೋಮಿತಿ ಸಡಿಲಿಕೆ ಇದೆ.

ಆಯ್ಕೆ ಪ್ರಕ್ರಿಯೆ : ಎರಡು ಹಂತದ ಪರೀಕ್ಷೆ ನಡೆಸಲಾಗಯತ್ತದೆ. ಮೊದಲ ಹಂತದ ಪರೀಕ್ಷೆಯನ್ನು 100 ಅಂಕಗಳಿಗೆ ಮತ್ತು ಎರಡನೇ ಹಂತದ ಪರೀಕ್ಷೆ 200 ಅಂಕಗಳಿಗೆ ನಡೆಸಲಾಗುತ್ತದೆ.

ಮುಖ್ಯ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಶಾರ್ಟ್ ಲಿಸ್ಟ್ ನಲ್ಲಿ ಆಯ್ಕೆಯಾದ ಅಭ್ಯರ್ಥಿಗಳನ್ನು ಪ್ರಾದೇಶಿಕ ಭಾಷಾ ಪರೀಕ್ಷೆಗೆ ಆಯ್ಕೆ ಮಾಡಲಾಗುವುದು

ಪರೀಕ್ಷಾ ಕೇಂದ್ರ : ಉತ್ತರ ವಲಯ, ಪೂರ್ವ ವಲಯ, ಪಶ್ಚಿಮ ವಲಯ ಮತ್ತು ದಕ್ಷಿಣ ವಲಯ ಎಂಬುದಾಗಿ ಪರೀಕ್ಷೆ ನಡೆಸಲಾಗುವುದು. ಕರ್ನಾಟಕದ ಅಭ್ಯರ್ಥಿಗಳು ದಕ್ಷಿಣ ವಲಯದ ಬೆಂಗಳೂರು ಕೇಂದ್ರದಲ್ಲಿ ಪರೀಕ್ಷೆ ಬರೆಯಬಹುದು.

ವೇತನ : ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.14,650 ರ ಜೊತೆಗೆ ಇತರೆ ಭತ್ಯೆಗಳು ಸೇರಿದಂತೆ ರೂ.34990 ವರೆಗೆ ಮಾಸಿಕ ವೇತನ ದೊರಕಲಿದೆ.

ಅರ್ಜಿ ಸಲ್ಲಿಸುವುದು ಹೇಗೆ ? ಭಾರತೀಯ ರಿಸರ್ವ್ ಬ್ಯಾಂಕ್ ನ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ‌ನೀಡಿ, ಹೋಮ್ ಪೇಜ್ ನಲ್ಲಿ ‘ Application for 950 Assistant Posts’ ಮೇಲೆ ಕ್ಲಿಕ್ ಮಾಡಿ, ಮತ್ತೊಂದು ಹೊಸ ಪೇಜ್ ತೆರೆಯುತ್ತದೆ. ಅಲ್ಲಿ ಅಗತ್ಯ ಮಾಹಿತಿಯನ್ನು ನೀಡಿ ರಿಜಿಸ್ಟರ್ ಮಾಡಬೇಕು. ಅನಂತರ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ. ಅರ್ಜಿ ಶುಲ್ಕ ಪಾವತಿಸಿ, ಅಪ್ಲಿಕೇಶನ್ ಡೌನ್ಲೋಡ್ ಮಾಡಿಡಿ. ಮುಂದಿನ ರೆಫರೆನ್ಸ್ ಗೆ ಪ್ರಿಂಟ್ ತೆಗೆದುಕೊಳ್ಳಿ.