ಶನಿವಾರ, 24 ಅಕ್ಟೋಬರ್ 2026

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿ ಸುದ್ದಿ : ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ 6406 ಹುದ್ದೆ ಗಳಿಗೆ ಅಧಿಸೂಚನೆ ಪ್ರಕಟ !

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿಯೊಂದು ಸಿಕ್ಕಿದ್ದು, ‘ಗ್ರಾಮೀಣಾಭಿವೃದ್ಧಿ ಇಲಾಖೆ ಯಿಂದ ‘6,406 ಹುದ್ದೆ’ಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ.

ಹುದ್ದೆ : ಗ್ರಾಮ ಪಂಚಾಯತ್ ಕಾರ್ಯದರ್ಶಿ ಮತ್ತು ಗ್ರಾಮೀಣಾಭಿವೃದ್ಧಿ ಸಹಾಯಕ (ಗ್ರೇಡ್ 2) ಹುದ್ದೆಗೆ ಅಧಿಸೂಚನೆಯನ್ನು ಹೊರಡಿಸಿದೆ.

ವಿದ್ಯಾರ್ಹತೆ : ಪದವಿ ಪೂರ್ವ ಶಿಕ್ಷಣದಲ್ಲಿ ತೇರ್ಗಡೆಯಾಗಿರಬೇಕು ಅಥವಾ ತತ್ಸಮಾನ ಅರ್ಹತೆಯನ್ನು ಹೊಂದಿರತಕ್ಕದ್ದು ಮತ್ತು ಕಂಪ್ಯೂಟರ್ ಕಲಿಕೆ ಅಗತ್ಯವಾಗಿದೆ.

ಹಿಂದಿನ ಮಂಡಲ ಪಂಚಾಯತ್ ಅಥವಾ ಗ್ರಾಮ ಪಂಚಾಯತ್ ಗಳಲ್ಲಿ ಬಿಲ್ ಕಲೆಕ್ಟರ್ ಗಳು/ಗುಮಾಸ್ತರು/ ಬೆರಳಚ್ಚುಗಾರರು/ಗುಮಾಸ್ತ ಕಮ್ ಡೇಟಾ ಎಂಟ್ರಿ ಆಪರೇಟರ್ ಗಳಾಗಿ 6 ವರ್ಷಗಳಿಗಿಂತ ಕಡಿಮೆ ಸೇವೆ ಸಲ್ಲಿಸಿರಬೇಕು.

ವೇತನ : ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.21,400-42,000 ರೂ ವೇತನ ನೀಡಲಾಗುತ್ತದೆ.

ದ್ವಿತೀಯ ದರ್ಜೆ ಲೆಕ್ಕ ಸಹಾಯಕರು ವೃಂದದ ಹುದ್ದೆಗೆ ಪದವಿ ಪೂರ್ವ ಶಿಕ್ಷಣದಲ್ಲಿ ವಾಣಿಜ್ಯ ವಿಷಯದೊಂದಿಗೆ ತೇರ್ಗಡೆಯಾಗಿರತಕ್ಕದ್ದು ಅಥವಾ ತತ್ಸಮಾನ ಅರ್ಹತೆಯನ್ನು ಹೊಂದಿರತಕ್ಕದ್ದು ಮತ್ತು ಕಂಪ್ಯೂಟರ್ ಕಲಿಕೆ ಅಗತ್ಯವಾಗಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ