Home Jobs SBI ನಲ್ಲಿ 5008 JA ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ | ಆಸಕ್ತರು ಈ ಕೂಡಲೇ...

SBI ನಲ್ಲಿ 5008 JA ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ | ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ

Hindu neighbor gifts plot of land

Hindu neighbour gifts land to Muslim journalist

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದ (State Bank Of India) ಭರ್ಜರಿ ಉದ್ಯೋಗದ ಅಧಿಸೂಚನೆ ಹೊರಡಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.

ಹುದ್ದೆ : 5008 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಜೂನಿಯರ್ ಅಸೋಸಿಯೇಟ್ಸ್ (ಕಸ್ಟಮರ್ ಸಪೋರ್ಟ್ ಅಂಡ್ ಸೇಲ್ಸ್)ನಲ್ಲಿ ಈ ಪ್ರಮಾಣದ ನೇಮಕಾತಿಗೆ ಅರ್ಜಿ ಹೊರಡಿಸಲಾಗಿದೆ. ದೇಶಾದ್ಯಂತ ಈ ನೇಮಕಾತಿ ನಡೆಯಲಿದೆ.

ಇನ್ನು ಕರ್ನಾಟಕಕ್ಕೆ 316 ಹುದ್ದೆಗಳನ್ನು ಮೀಸಲಿರಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಸೆಪ್ಟೆಂಬರ್ 27 ಆಗಿದೆ.

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ – 07-09-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 27-09-2022

ಬ್ಯಾಂಕ್ ಹೆಸರು: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI)
ಹುದ್ದೆಯ ಹೆಸರು: ಜೂನಿಯರ್ ಅಸೋಸಿಯೇಟ್ಸ್ (ಗ್ರಾಹಕ ಬೆಂಬಲ ಮತ್ತು ಮಾರಾಟ)
ಹುದ್ದೆಗಳ ಸಂಖ್ಯೆ: 5008
ಸ್ಥಳ: ಅಖಿಲ ಭಾರತ
ವೇತನ: 17900-47920 ರೂ. ಪ್ರತಿ ತಿಂಗಳು

ವಿದ್ಯಾರ್ಹತೆ: ನೇಮಕಾತಿ ಅಧಿಸೂಚನೆಯ ಪ್ರಕಾರ
ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿಯನ್ನು ಪೂರ್ಣಗೊಳಿಸಿರಬೇಕು.

ವಯಸ್ಸಿನ ಮಿತಿ: ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 20 ವರ್ಷಗಳು ಮತ್ತು ಗರಿಷ್ಠ 28 ವರ್ಷಗಳನ್ನು ಹೊಂದಿರಬೇಕು.
ಒಬಿಸಿ ಅಭ್ಯರ್ಥಿಗಳು: 3 ವರ್ಷಗಳು ಪ.ಜಾ, ಪ.ಪಂ ಅಭ್ಯರ್ಥಿಗಳು: 5 ವರ್ಷ ವಿಕಲಚೇತನ ಅಭ್ಯರ್ಥಿಗಳು: 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ಅರ್ಜಿ ಶುಲ್ಕ: ಸಾಮಾನ್ಯ, ಒಬಿಸಿ: 750 ರೂ, ಪ.ಜಾ, ಪ.ಪಂ ಮತ್ತು ವಿಕಲಚೇತನ: ಶುಲ್ಕ ವಿನಾಯಿತಿ

ಆಯ್ಕೆ ಪ್ರಕ್ರಿಯೆ: ಪೂರ್ವಭಾವಿ ಪರೀಕ್ಷೆ, ಮುಖ್ಯ ಪರೀಕ್ಷೆ,
ಅಬ್ಜೆಕ್ಟಿವ್ ಪರೀಕ್ಷೆಗಳಲ್ಲಿ ತಪ್ಪು ಉತ್ತರಗಳಿಗೆ ಋಣಾತ್ಮಕ ಅಂಕಗಳಿರುತ್ತವೆ.

ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ನೋಟಿಫಿಕೇಶನ್ ಕ್ಲಿಕ್ ಮಾಡಿ