Home Education ನಿರುದ್ಯೋಗಿ ಯುವಕ-ಯುವತಿಯರಿಗೆ ಉಚಿತ ತರಬೇತಿಯ ಅವಕಾಶ | ಎಸ್ಎಸ್ಎಲ್ ಸಿಯಿಂದ ಹಿಡಿದು ಪದವಿವರೆಗಿನ ಅಭ್ಯರ್ಥಿಗಳಿಂದ ಅರ್ಜಿ...

ನಿರುದ್ಯೋಗಿ ಯುವಕ-ಯುವತಿಯರಿಗೆ ಉಚಿತ ತರಬೇತಿಯ ಅವಕಾಶ | ಎಸ್ಎಸ್ಎಲ್ ಸಿಯಿಂದ ಹಿಡಿದು ಪದವಿವರೆಗಿನ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

Hindu neighbor gifts plot of land

Hindu neighbour gifts land to Muslim journalist

ಹರಿಹರದ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿ ಮುಖ್ಯಮಂತ್ರಿಗಳ ಕೌಶಲ್ಯ ಕರ್ನಾಟಕ ಯೋಜನೆ (ಸಿಎಂಕೆಕೆವೈ), ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆ (ಎಸ್‍ಸಿಪಿ-ಟಿಎಸ್‍ಪಿ) ಮೂಲಕ 18 ರಿಂದ 35 ವರ್ಷದೊಳಗಿನ ನಿರುದ್ಯೋಗಿ ಯುವಕ-ಯುವತಿಯರಿಗೆ ಉಚಿತ ಅಲ್ಪಾವಧಿ ತರಬೇತಿ ನೀಡಲಾಗುತ್ತಿದ್ದು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಎಸ್.ಎಸ್.ಎಲ್.ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಬಿಇ ಮತ್ತು ಯಾವುದೇ ಪದವಿ ಪಾಸ್ ಆಗಿರುವ ಅಭ್ಯರ್ಥಿಗಳಿಗೆ ಡೊಮೆಸ್ಟಿಕ್ ಡಾಟಾ ಎಂಟ್ರಿ ಆಪರೇಟರ್, ಸಿ.ಎನ್.ಸಿ ಆಪರೇಟರ್ ಟರ್ನಿಂಗ್, ಸಿಎನ್‍ಸಿ ಪ್ರೋಗ್ರಾಮರ್, ಕನ್‍ವೆನ್‍ಷನಲ್ ಟರ್ನಿಂಗ್ ಮಷಿನ್ ಆಪರೇಟರ್, ಮಿಲ್ಲಿಂಗ್ ಮಷಿನ್ ಆಪರೇಟರ್, ಸರ್ಫೇಸ್ ಗ್ರೈಂಡಿಂಗ್ ಮಷಿನ್ ಆಪರೇಟರ್, ಡಿಸೈನರ್-ಮೆಕಾನಿಕಲ್, ಪ್ರೊಡಕ್ಷನ್ ಇಂಜಿನಿಯರಿಂಗ್, ಟೂಲ್ ರೂಮ್ ಮಷಿನಿಷ್ಟ್ ಕೋರ್ಸ್ ಗಳಲ್ಲಿ ಅಲ್ಪಾವಧಿ ತರಬೇತಿ ನೀಡಲಾಗುವುದು.

ತರಬೇತಿಯ ಅವಧಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಶಿಷ್ಯವೇತನ ಕೂಡ ನೀಡಲಾಗುವುದು. ತರಬೇತಿ ಮುಗಿದ ನಂತರ ಉದ್ಯೋಗವಕಾಶಕ್ಕೆ ಮಾರ್ಗದರ್ಶನ ನೀಡಲಾಗುವುದು.

ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಡಿ.10 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಕುರಿತು ಈ ಕೆಳಗಿನ ವಿಳಾಸವನ್ನು ಸಂಪರ್ಕಿಸಬಹುದು.

ಪ್ರಾಂಶುಪಾಲರು, ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, 22 ಸಿ ಮತ್ತು ಡಿ, ಕೆಐಎಡಿಬಿ, ಇಂಡಸ್ಟ್ರಿಯಲ್ ಏರಿಯ, ಹರ್ಲಾಪುರ, ಕೆಎಸ್‍ಆರ್‍ಟಿಸಿ ಡಿಪೋ ಹತ್ತಿರ, ಹರಿಹರ.
ಫೋನ್ ನಂಬರ್: 08192-243937, ಮೊಬೈಲ್ ಸಂಖ್ಯೆ: 9916018111, 8884488202, 8711913947 ಕ್ಕೆ ಸಂಪರ್ಕಿಸಬಹುದು ಎಂದು ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.