Home latest ಅಕ್ರಮ ಸಕ್ರಮ ವಿಧಾನ ಸಭೆಯಲ್ಲಿ ಭೂಕಂದಾಯ ಮಸೂದೆ -2022 ಮಂಡನೆ

ಅಕ್ರಮ ಸಕ್ರಮ ವಿಧಾನ ಸಭೆಯಲ್ಲಿ ಭೂಕಂದಾಯ ಮಸೂದೆ -2022 ಮಂಡನೆ

Hindu neighbor gifts plot of land

Hindu neighbour gifts land to Muslim journalist

ಬೆಂಗಳೂರು : ಸರಕಾರಿ ಜಾಗದಲ್ಲಿ ಸಾಗುವಳಿ ಮಾಡುತ್ತಿರುವ ಜಮೀನಿನ ಸಕ್ರಮಕ್ಕೆ ಮತ್ತೊಂದು ವರ್ಷ ಅವಧಿ ವಿಸ್ತರಿಸಲು ಮುಂದಾಗಿರುವ ಸರ್ಕಾರ, ಅದಕ್ಕಾಗಿ ಕಾಯ್ದೆಗೆ ತಿದ್ದುಪಡಿ ತರಲಾಗಿದೆ.

ಸರ್ಕಾರಿ ಭೂಮಿಯಲ್ಲಿ ಸಾಗುವಳಿ ಮಾಡುತ್ತಿರುವವರು ಸಕ್ರಮಕ್ಕಾಗಿ ನಮೂನೆ–57 ರಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ವಿಸ್ತರಿಸಲು ತಂದಿರುವ ‘ಕರ್ನಾಟಕ ಭೂಕಂದಾಯ (ತಿದ್ದುಪಡಿ) ಮಸೂದೆ–2022’ ವಿಧಾನಸಭೆಯಲ್ಲಿ ಮಂಗಳವಾರ ಮಂಡಿಸಲಾಯಿತು.

ಸಚಿವ ಆರ್.ಅಶೋಕ ಪರವಾಗಿ ಸಚಿವ ಗೋವಿಂದ ಕಾರಜೋಳ ಮಸೂದೆ ಮಂಡಿಸಿದರು. ಮೇ 26 ರಂದು ಈ ಸಂಬಂಧ ಸುಗ್ರೀವಾಜ್ಞೆ ಹೊರಡಿಸಲಾಗಿದೆ. ಇದೀಗ ಮಸೂದೆಯನ್ನು ಮಂಡಿಸಲಾಗಿದೆ.

2005ರ ಜನವರಿ 1ಕ್ಕೂ ಹಿಂದಿನಿಂದ ಸರ್ಕಾರಿ ಜಮೀನುಗಳಲ್ಲಿ ಅನಧಿಕೃತ ಸಾಗುವಳಿ ಮಾಡುತ್ತಿರುವವರು ಸಕ್ರಮಕ್ಕೆ ಅರ್ಜಿ ಸಲ್ಲಿಸಲು 2018ರ ಮಾರ್ಚ್ 17ರಿಂದ 2019ರ ಮಾರ್ಚ್ 16ರವರೆಗೆ ಅವಕಾಶ ಕಲ್ಪಿಸಲಾಗಿದೆ. ಆದರೆ, ಆಗ ಲೋಕಸಭೆಯ ಚುನಾವಣೆ ಘೋಷಣೆಯಾಗಿ 2019ರ ಮಾರ್ಚ್ 10ರಿಂದ ಅರ್ಜಿಯನ್ನು ಸ್ವೀಕರಿಸಲಾಗಿಲ್ಲ. ಅವಧಿಯನ್ನು ವಿಸ್ತರಿಸುವಂತೆ ಶಾಸಕರು ಮತ್ತು ಸಾರ್ವಜನಿಕರಿಂದ ಮನವಿ ಸಲ್ಲಿಸಿದರು. ಈ ಹಿನ್ನೆಲೆಯೊಳಗೆ ಮತ್ತೆ ಅವಧಿ ವಿಸ್ತರಿಸಲು ಕಾಯ್ದೆಗೆ ತಿದ್ದುಪಡಿ ತರಲಾಗಿದೆ.

ಆದ್ದರಿಂದ, ಕರ್ನಾಟಕ ಭೂಕಂದಾಯ ಅಧಿನಿಯಮ, 1964, 94E ಅನ್ನು ತಿದ್ದುಪಡಿ ಮಾಡುವುದರ ಮೂಲಕ ನಮೂನೆ 57 ಅರ್ಜಿ ಸಲ್ಲಿಸಲು ಸಮಯವನ್ನು ವಿಸ್ತರಿಸುವ ಮಸೂದೆಯನ್ನು ತಿದ್ದುಪಡಿ ಮಾಡಬೇಕೆಂದು ಹೇಳಿದೆ.