Home Education ವಿದ್ಯಾರ್ಥಿಗಳೇ ಗಮನಿಸಿ : ಮೆಟ್ರಿಕ್‌ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

ವಿದ್ಯಾರ್ಥಿಗಳೇ ಗಮನಿಸಿ : ಮೆಟ್ರಿಕ್‌ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

Hindu neighbor gifts plot of land

Hindu neighbour gifts land to Muslim journalist

ಮೆಟ್ರಿಕ್ ನಂತರದ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ 2021-22ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ‘ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ’, ‘ಶುಲ್ಕ ವಿನಾಯಿತಿ’ ಮತ್ತು ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ’ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಅರ್ಹ ಅಭ್ಯರ್ಥಿಗಳು 30-06-2022ರ ವೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್ಸೈಟ್ bcwd.karnataka.gov.in ಗೆ ಭೇಟಿ ನೀಡಿ, ಮಾಹಿತಿ ಪಡೆದುಕೊಳ್ಳಬಹುದು.

ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 30-06-2022
ಅರ್ಜಿ ಸಲ್ಲಿಸಲು ವೆಬ್‌ಸೈಟ್:
https://bcwd.karnataka.gov.in
ಸಹಾಯವಾಣಿ ಸಂಖ್ಯೆ : 8050770005/8050770004

ಯಾರೆಲ್ಲಾ ಈ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಬಹುದು?

ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1, ಪ್ರವರ್ಗ-2ಎ, 3ಎ, 3ಬಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.

ಕೆಲವೊಂದು ಸೂಚನೆಗಳು : ಭಾರತ ಸರ್ಕಾರ ಅಥವಾ ರಾಜ್ಯ ಸರ್ಕಾರ ಅಧಿಸೂಚಿರುವ, ಇತರೆ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಸೇರಿರಬೇಕು. ಭಾರತದ ಪ್ರಜೆಯಾಗಿದ್ದು, ಕರ್ನಾಟಕದ ಖಾಯಂ ನಿವಾಸಿ ಆಗಿರಬೇಕು.

ವಿದ್ಯಾರ್ಥಿನಿಲಯದಲ್ಲಿ ಪ್ರವೇಶ ಅಥವಾ ಊಟ ಮತ್ತು ವಸತಿ ಸಹಾಯ ಯೋಜನೆ ಅಥವಾ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಇವುಗಳಲ್ಲಿ ಒಬ್ಬ ವಿದ್ಯಾರ್ಥಿಯು ಯಾವುದಾದರೂ ಒಂದು ಸೌಲಭ್ಯಕ್ಕೆ ಮಾತ್ರ ಅರ್ಹರು. ಆದರೆ ಶುಲ್ಕವಿನಾಯಿತಿ ಸೌಲಭ್ಯವನ್ನು ಎಲ್ಲ ಅರ್ಹ ವಿದ್ಯಾರ್ಥಿಗಳಿಗೂ ನೀಡಲಾಗುವುದು.

ವಿದ್ಯಾಸಿರಿ ಯೋಜನೆಯ ಸೌಲಭ್ಯವನ್ನು ಯಾವುದೇ ಇಲಾಖೆಯ ಸರ್ಕಾರಿ / ಸರ್ಕಾರಿ ಅನುದಾನಿತ ವಿದ್ಯಾರ್ಥಿ ನಿಲಯ / ವಸತಿ ಕಾಲೇಜುಗಳಲ್ಲಿ ಪ್ರವೇಶ ದೊರೆಯದ ಹಾಗೂ ಮೆಟ್ರಿಕ್ ನಂತರದ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುವ, ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಈ ಸೌಲಭ್ಯವನ್ನು ಒದಗಿಸಲಾಗುವುದು.

ವಿದ್ಯಾರ್ಥಿಯ ತಂದೆ – ತಾಯಿ / ಪೋಷಕರ ಕುಟುಂಬದ ಒಟ್ಟು ವಾರ್ಷಿಕ ವರಮಾನ ಪ್ರವರ್ಗ-1 ವಿದ್ಯಾರ್ಥಿಗಳಿಗೆ ರೂ.2.50 ಲಕ್ಷಗಳು ಪ್ರವರ್ಗ-2A, 3A, 3B ಮತ್ತು ಇತರೆ ಹಿಂದುಳಿದ ವಿದ್ಯಾರ್ಥಿಗಳಿಗೆ ರೂ.1.00 ಲಕ್ಷದೊಳಗಿರಬೇಕು.

ಹೊಸದಾಗಿ ಅರ್ಜಿ ಸಲ್ಲಿಸುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ವಿದ್ಯಾಸಿರಿ- ಊಟ ಮತ್ತು ವಸತಿ ಸಹಾಯ ಯೋಜನೆ / ಶುಲ್ಕ ವಿನಾಯಿತಿ | ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಕಾರ್ಯಕ್ರಮಗಳ ಸೌಲಭ್ಯ ಪಡೆಯಲು ಒಂದೇ ಅರ್ಜಿ ಸಲ್ಲಿಸಬೇಕು.

ನವೀಕರಣ ವಿದ್ಯಾರ್ಥಿಗಳುಈಗಾಗಲೇ 2020-21ನೇ ಸಾಲಿನಲ್ಲಿ ಸಲ್ಲಿಸಿರುವ ಅರ್ಜಿ ಸಂಖ್ಯೆಯನ್ನು ನಮೂದಿಸಿ 2021-22ನೇ ಸಾಲಿಗೆ ನವೀಕರಣ ಅರ್ಜಿಯನ್ನು ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ವಿದ್ಯಾರ್ಥಿಗಳು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು/ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳನ್ನು ಸಂಪರ್ಕಿಸಬಹುದು.ಅಥವಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವೆಬ್ ಸೈಟ್ www.backwardclasses.kar.nic.in ಸಂಪರ್ಕಿಸಬಹುದು.

ಬೇಕಾಗುವ ದಾಖಲೆಗಳು : ಆಧಾರ್ ಕಾರ್ಡ್, ಪ್ರವೇಶ ಪಡೆದ ದಾಖಲೆ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಅಂಕಪಟ್ಟಿಗಳು, ಇತರೆ ದಾಖಲೆಗಳು