

Bengaluru Bandh: ಬೆಂಗಳೂರಿನ ಎಲ್ಲಾ ಶಾಲಾ ಕಾಲೇಜುಗಳಿಗೆ ನಾಳೆ ಬಂದ್ ಹಿನ್ನೆಲೆಯ ಕಾರಣ ರಜೆ ಘೋಷಣೆ ಮಾಡಲಾಗಿದೆ. ಕಾವೇರಿ ನದಿ ನೀರಿನ ವಿಚಾರವಾಗಿ ಸೆ.26ರಂದು ಬೆಂಗಳೂರು ಬಂದ್‌ಗೆ ಕರೆ ನೀಡಿರುವ ಕಾರಣ ಮುನ್ನೆಚ್ಚರಿಕೆ ಕ್ರಮವಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಹಾಗಾಗಿ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಜಿಲ್ಲಾಧಿಕಾರಿ ಕೆ.ಎ.ದಯಾನಂದ ಅವರು ರಜೆ ಘೋಷಣೆ ಮಾಡಿದ್ದು, ನಗರದ ಎಲ್ಲಾ ಡಿಡಿಪಿಐ, ಬಿಇಒಗಳಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ. ರಾಜ್ಯದಲ್ಲಿ ಬರಪರಿಸ್ಥಿತಿ ನಿರ್ಮಾಣ ಉಂಟಾಗಿದ್ದು, ಇದರ ನಡುವೆ ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧ ಮಾಡಿ ಹಲವು ಸಂಘಟನೆಗಳು ಪ್ರತಿಭಟನೆ ನಡೆಸುತ್ತಿರುವ ಕಾರಣ, ಸೆ.26 ರೈತ ಹಾಗೂ ಕನ್ನಡ ಪರ ಸಂಘಟನೆಗಳು ಬೆಂಗಳೂರು ಬಂದ್‌ಗೆ ಕರೆ ನೀಡಿದೆ. ಹಾಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.













