Home Jobs BEL ನಲ್ಲಿ ಉದ್ಯೋಗವಕಾಶ :  ಬಿಇ, ಬಿ.ಟೆಕ್, ಬಿಎಸ್ಸಿ ಪಾಸಾದವರು ಅರ್ಜಿ ಹಾಕಿ, ವೇತನ ರೂ.45,000...

BEL ನಲ್ಲಿ ಉದ್ಯೋಗವಕಾಶ :  ಬಿಇ, ಬಿ.ಟೆಕ್, ಬಿಎಸ್ಸಿ ಪಾಸಾದವರು ಅರ್ಜಿ ಹಾಕಿ, ವೇತನ ರೂ.45,000 ವರೆಗೆ

Hindu neighbor gifts plot of land

Hindu neighbour gifts land to Muslim journalist

ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ನೇಮಕಾತಿ ಪ್ರಕಟಣೆ ಹೊರಡಿಸಿದೆ. ಹುದ್ದೆಗಳ ಕುರಿತ ಇತರೆ ಹೆಚ್ಚಿನ ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು.

ಉದ್ಯೋಗ ಕಂಪನಿ : ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್

ಹುದ್ದೆ : ಟ್ರೈನಿ ಇಂಜಿನಿಯರ್ – 40 ಹುದ್ದೆಗಳು.
ಹಾಗೂ ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆ – 60 ಹುದ್ದೆಗಳು. ಈ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದೆ.

ವಿದ್ಯಾರ್ಹತೆ : ಬಿಇ / ಬಿ.ಟೆಕ್ / ಬಿಎಸ್ಸಿ ಪಾಸಾದ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ವಯೋಮಿತಿ : ಟ್ರೈನಿ ಇಂಜಿನಿಯರ್ ಹುದ್ದೆಗೆ ಗರಿಷ್ಠ 28 ವರ್ಷ, ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗೆ ಗರಿಷ್ಠ 32 ವರ್ಷ ಮೀರಿರಬಾರದು. ವರ್ಗಾವಾರು ವಯೋಮಿತಿ ಸಡಿಲಿಕೆ ನಿಯಮಗಳು ಸರ್ಕಾರಿ ರೂಲ್ಸ್‌ನಂತೆ ಅನ್ವಯವಾಗಲಿವೆ. ಒಬಿಸಿ ವರ್ಗದವರಿಗೆ 3 ವರ್ಷ, ಎಸ್ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಅನ್ವಯವಾಗಲಿವೆ.

ಅಭ್ಯರ್ಥಿಗಳನ್ನು ಎರಡು ವರ್ಷಗಳ ಅವಧಿಗೆ ನೇಮಕ ಮಾಡಿಕೊಳ್ಳಲಾಗುತ್ತದೆ. ರೂ.12,000 ಅನ್ನು ಮೆಡಿಕಲ್ ಹಾಗೂ ಇತರೆ ಭತ್ಯೆಗಳಾಗಿ ಅಭ್ಯರ್ಥಿಗಳಿಗೆ ನೀಡಲಾಗುತ್ತದೆ.

ವೇತನ : ಟ್ರೈನಿ ಇಂಜಿನಿಯರ್ ಹುದ್ದೆ : ಮೊದಲನೇ ವರ್ಷ ರೂ.30,000. 2ನೇ ವರ್ಷ ರೂ.35,000. ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆ: ಮೊದಲನೇ ವರ್ಷ ರೂ..40,000. ಎರಡನೇ ವರ್ಷ ರೂ.45,000.

ಅನುಭವ : ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗೆ ಕನಿಷ್ಠ ಎರಡು ವರ್ಷ ಸಾಫ್ಟ್‌ವೇರ್ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಇರಬೇಕು.

ಆಯ್ಕೆ ಪ್ರಕ್ರಿಯೆ : ಅಭ್ಯರ್ಥಿಗಳಿಗೆ ಮೊದಲು ಲಿಖಿತ ಪರೀಕ್ಷೆ ನಡೆಸಲಾಗುತ್ತದೆ. ಈ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳಿಗೆ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ. ಲಿಖಿತ ಪರೀಕ್ಷೆ ಕುರಿತು ವಿವರಗಳನ್ನು ಅಭ್ಯರ್ಥಿಗಳಿಗೆ ಇ-ಮೇಲ್ ಮಾಡಲಾಗುತ್ತದೆ.

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ತಮ್ಮ ಎಸ್‌ಎಸ್‌ಎಲ್‌ಸಿ ವಿದ್ಯಾರ್ಹತೆ, ಹುದ್ದೆಗೆ ಬೇಕಾದ ವಿದ್ಯಾರ್ಹತೆ, ಕಾರ್ಯಾನುಭವದ ಜತೆಗೆ, ಬಿಇಎಲ್ ನೀಡಿದ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಈ ಕೆಳಗಿನ ವಿಳಾಸಕ್ಕೆ ಸೆಪ್ಟೆಂಬರ್ 23 ರ ಒಳಗೆ ತಲುಪುವಂತೆ ಅಂಚೆ ಮೂಲಕ ಕಳುಹಿಸಬೇಕು.

ಅರ್ಜಿ ಸಲ್ಲಿಸಬೇಕಾದ ವಿಳಾಸ : ‘Manager (HR/ES &SW), Bharat Electronics Limited, Jalahalli
Post, Bengaluru-560013‘.

ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ