Home latest Fire Accident: ವಿಧಾನಸೌಧ ಸಚಿವಾಲಯದಲ್ಲಿ ಭಾರೀ ಅಗ್ನಿ ಅವಘಡ; ಕಡತಗಳು ಭಸ್ಮ

Fire Accident: ವಿಧಾನಸೌಧ ಸಚಿವಾಲಯದಲ್ಲಿ ಭಾರೀ ಅಗ್ನಿ ಅವಘಡ; ಕಡತಗಳು ಭಸ್ಮ

Hindu neighbor gifts plot of land

Hindu neighbour gifts land to Muslim journalist

Bhopal Fire: ಮಧ್ಯಪ್ರದೇಶದ ರಾಜಧಾನಿ ಭೋಪಾಲ್‌ನ ಅರೆರಾ ಹಿಲ್ಸ್‌ನಲ್ಲಿರುವ ವಿಧಾನಸೌಧ ಸಚಿವಾಲಯದಲ್ಲಿ ಬೆಂಕಿ ಅವಘಢ ಸಂಭವಿಸಿದೆ.  ವಲ್ಲಭ ಭವನದ (ಸಚಿವಾಲಯ) ಮೂರನೇ ಮಹಡಿಯಲ್ಲಿ ಶನಿವಾರ ಬೆಳಗ್ಗೆ ಬೆಂಕಿ ಕಾಣಿಸಿಕೊಂಡಿದೆ. ಕಟ್ಟಡದ ಮೂರನೇ ಮಹಡಿಯಲ್ಲಿ ಗೇಟ್ ಸಂಖ್ಯೆ 5 ಮತ್ತು 6 ರ ನಡುವೆ ಬೆಂಕಿ ಕಾಣಿಸಿಕೊಂಡಿದೆ. ಘಟನೆ ಕುರಿತು ಮಾಹಿತಿ ಪಡೆದ ತಕ್ಷಣ ಅಗ್ನಿಶಾಮಕ ದಳದ ಹಲವು ವಾಹನಗಳು ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಿಯಂತ್ರಿಸಲು ಹರಸಾಹಸ ಪಡುತ್ತಿದ್ದಾರೆ. ಅಗ್ನಿಯ ಕೆನ್ನಾಲಿಗೆಗೆ ಕಡತಗಳು ಕೂಡಾ ಭಸ್ಮವಾಗಿದೆ ಎಂದು ವರದಿಯಾಗಿದೆ.

ಮಾಹಿತಿಯ ಪ್ರಕಾರ, ಅರೆರಾ ಹಿಲ್ಸ್‌ನಲ್ಲಿರುವ ವಲ್ಲಭ ಭವನದ (ಸಚಿವಾಲಯ) ಮೂರನೇ ಮಹಡಿಯಲ್ಲಿ ಶನಿವಾರ ಬೆಳಗ್ಗೆ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಹೊತ್ತಿಕೊಂಡ ತಕ್ಷಣ ಸಚಿವಾಲಯದ ಕಟ್ಟಡದಲ್ಲಿ ಅಲ್ಲೋಲ ಕಲ್ಲೋಲ ಉಂಟಾಯಿತು. ಗೇಟ್ ಸಂಖ್ಯೆ 5 ಮತ್ತು 6 ರ ನಡುವಿನ ದೊಡ್ಡ ಕಟ್ಟಡದ ಮೂರನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಹೇಳಲಾಗುತ್ತಿದೆ.

ಘಟನೆಯ ಬಗ್ಗೆ ಮಾಹಿತಿ ಪಡೆದ ತಕ್ಷಣ ಅನೇಕ ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ಬಂದವು. ಎರಡನೇ ಮತ್ತು ಮೂರನೇ ಮಹಡಿಯಲ್ಲಿ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದ್ದು, ನಾಲ್ಕನೇ ಮಹಡಿಯಲ್ಲಿ ಬೆಂಕಿ ನಂದಿಸುವ ಪ್ರಯತ್ನ ನಡೆಯುತ್ತಿದೆ ಎಂದು ವಲಯ-2 ಡಿಸಿಪಿ ಶ್ರದ್ಧಾ ತಿವಾರಿ ತಿಳಿಸಿದ್ದಾರೆ. ಕಟ್ಟಡದೊಳಗೆ ಯಾರಾದರೂ ಸಿಲುಕಿಕೊಂಡಿದ್ದರೆ ಅವರನ್ನು ಸುರಕ್ಷಿತವಾಗಿ ಹೊರ ತೆಗೆಯಲಾಗುವುದು ಎಂದು ತಿಳಿಸಿದರು.

ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್ ಅವರು ಭೋಪಾಲ್‌ನ ವಲ್ಲಭ ಭವನದ ರಾಜ್ಯ ಸಚಿವಾಲಯದಲ್ಲಿ ಅಗ್ನಿ ದುರಂತದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ‘ವಲ್ಲಭ ಭವನದ ಹಳೆಯ ಕಟ್ಟಡದ ಮೂರನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿರುವುದು ನನ್ನ ಅರಿವಿಗೆ ಬಂದಿದೆ. ಜಿಲ್ಲಾಧಿಕಾರಿಯಿಂದ ಬಂದ ಮಾಹಿತಿ ಆಧರಿಸಿ ಸಿಎಸ್‌ಗೆ ನಿಗಾ ವಹಿಸುವಂತೆ ತಿಳಿಸಿದ್ದೇನೆ. ಮುಂದೆ ಇಂತಹ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಲು ಸೂಚನೆ ನೀಡಿದ್ದೇವೆ. ಮುಂದೆ ಇಂತಹ ಘಟನೆ ಮರುಕಳಿಸಬಾರದು ಎಂದು ಹಾರೈಸುತ್ತೇನೆ.