# ಬೆಳ್ತಂಗಡಿ:ಉಜಿರೆ ಅನುಗ್ರಹ ಶಾಲೆ ಬಳಿ ಲಾರಿ- ದ್ವಿಚಕ್ರ ವಾಹನ ಡಿಕ್ಕಿ | ದ್ವಿಚಕ್ರ ವಾಹನ ಸವಾರನಿಗೆ ಗಂಭೀರ ಗಾಯ

- Link: https://hosakannada.com/latest/bike-and-lari-accident/
- Published: 2021-12-11T10:38:20+00:00
- Author: ನಿಶ್ಮಿತಾ ಎನ್.

ಬೆಳ್ತಂಗಡಿ :ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ಬಳಿ ಆಕ್ಟಿವಾ ಮತ್ತು ಲಾರಿ ಪರಸ್ಪರ ಡಿಕ್ಕಿ
ಹೊಡೆದ ಘಟನೆ ಇಂದು ಬೆಳಿಗ್ಗೆ ನಡೆದಿದೆ.

Sponsored

ಕಲ್ಮಂಜ ನಿವಾಸಿ ರಾಜೇಶ್ ಎಂಬವವರು ತಮ್ಮ ದ್ವಿಚಕ್ರ ವಾಹನದಲ್ಲಿ ಕಲ್ಮಂಜದಿಂದ ಉಜಿರೆ ಕಡೆಗೆ ಪ್ರಯಾಣಿಸುತ್ತಿದ್ದ
ಸಂದರ್ಭದಲ್ಲಿ ಉಜಿರೆಯಿಂದ ಕಕ್ಕಿಂಜೆ ಕಡೆಗೆ ಸಂಚರಿಸುತ್ತಿದ್ದ ಲಾರಿ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ
ಬಳಿ ಪರಸ್ಪರ ಡಿಕ್ಕಿ ಹೊಡೆದಿದೆ.

Advertisement

Advertisement

ಡಿಕ್ಕಿ ಹೊಡೆದ ರಭಸಕ್ಕೆ ದ್ವಿಚಕ್ರ ವಾಹನದ ಮುಂಭಾಗ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದ್ದು, ಆಕ್ಟಿವಾ
ಸವಾರ ಕಲ್ಮಂಜ ನಿವಾಸಿ ರಾಜೇಶ್ ಈ ವೇಳೆ ರಸ್ತೆಗೆಸೆಯಲ್ಪಟ್ಟು ಕಾಲಿಗೆ ಗಂಭೀರ ಗಾಯಗಳಾಗಿದೆ.

ಕೂಡಲೇ ಸ್ಥಳೀಯರ ಸಹಕಾರದಿಂದ ಗಾಯಾಳುವನ್ನು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ,
ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿದೆ ಎಂಬ ಮಾಹಿತಿ ತಿಳಿದು ಬಂದಿದೆ.
ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ
ನೀಡಿ ಪರಿಶೀಲನೆ ನಡೆಸಿದ್ದಾರೆ.

Advertisement
