Home latest ಕರ್ನಾಟಕಕ್ಕೂ ಕಾಲಿಟ್ಟ ಓಮಿಕ್ರೋನ್| ಈ ಹಿನ್ನೆಲೆಯಲ್ಲಿ ಆರೋಗ್ಯ ತಜ್ಞರ ಜೊತೆ ಸಿ.ಎಂ ಬೊಮ್ಮಾಯಿ ಇಂದು ಮಧ್ಯಾಹ್ನ...

ಕರ್ನಾಟಕಕ್ಕೂ ಕಾಲಿಟ್ಟ ಓಮಿಕ್ರೋನ್| ಈ ಹಿನ್ನೆಲೆಯಲ್ಲಿ ಆರೋಗ್ಯ ತಜ್ಞರ ಜೊತೆ ಸಿ.ಎಂ ಬೊಮ್ಮಾಯಿ ಇಂದು ಮಧ್ಯಾಹ್ನ ಸಭೆ|ಸರ್ಕಾರ ಯಾವೆಲ್ಲಾ ಕಠಿಣ ಕ್ರಮ ಕೈಗೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಾಗಿದೆ!

Hindu neighbor gifts plot of land

Hindu neighbour gifts land to Muslim journalist

ಬೆಂಗಳೂರು : ಕರ್ನಾಟಕದಲ್ಲಿ ಎರಡು ಓಮಿಕ್ರೋನ್ ಪ್ರಕರಣಗಳು ನಿನ್ನೆ ಪತ್ತೆಯಾಗಿದೆ. ಅದರಲ್ಲೂ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪತ್ತೆಯಾಗಿದ್ದು, ರಾಜ್ಯದ ಜನರ ಆತಂಕಕ್ಕೆ ಕಾರಣವಾಗಿವೆ.ಈ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಹತ್ವದ ಸಭೆ ನಡೆಸಲಿದ್ದಾರೆ.

ದೆಹಲಿಯಲ್ಲಿರುವ ಸಿಎಂ ಬೊಮ್ಮಾಯಿ ಅವರು ಇಂದು ಬೆಂಗಳೂರಿಗೆ ಧಾವಿಸಲಿದ್ದು, ಮಧ್ಯಾಹ್ನ 1 ಗಂಟೆಗೆ ಆರೋಗ್ಯ ತಜ್ಞರ ಜೊತೆ ಸಭೆ ನಡೆಸಿ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಲಿದ್ದೇವೆ ಎಂದು ದೆಹಲಿಯಲ್ಲಿ ಸಿಎಂ ಬೊಮ್ಮಾಯಿ ಹೇಳಿದ್ದಾರೆ. ಸಭೆ ಬಳಿಕ ರಾಜ್ಯದಲ್ಲಿ ಟಫ್ ರೂಲ್ಸ್ ಜಾರಿಗೆ ಬರಲಿದೆ ಎನ್ನಲಾಗಿದ್ದು, ರಾಜ್ಯದಲ್ಲಿ ಒಮಿಕ್ರಾ ಸೋಂಕಿನ ಪತ್ತೆ ಹಿನ್ನೆಲೆ ಸರ್ಕಾರ ಯಾವೆಲ್ಲಾ ಕಠಿಣ ಕ್ರಮ ಕೈಗೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಾಗಿದೆ.

ರಾಜ್ಯದಲ್ಲಿ ನಿನ್ನೆ ಇಬ್ಬರಿಗೆ ಒಮಿಕ್ರಾನ್ ವೈರಸ್ ಧೃಡವಾಗಿದ್ದು, ದಕ್ಷಿಣ ಆಫ್ರಿಕಾದಿಂದ ಬಂದಿದ್ದ 66 ವರ್ಷದ ವೃದ್ದ ಮತ್ತು ಬೆಂಗಳೂರಿನ ವೈದ್ಯರಾದ 46 ವರ್ಷದ ವ್ಯಕ್ತಿಯಲ್ಲಿ ಒಮಿಕ್ರಾನ್‌ ವೈರಸ್‌ ಪತ್ತೆಯಾಗಿದೆ.

363 ಜನರಿಗೆ ಕೊರೊನಾ ಪಾಸಿಟಿವ್ ಧೃಡವಾಗಿದೆ. ಕಿಲ್ಲರ್ ಕೊರೊನಾ ಸೋಂಕಿಗೆ ಮೂವರು ಮೃತಪಟ್ಟಿದ್ದು, 191 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 29,96,833 ಕ್ಕೆ ಏರಿಕೆಯಾಗಿದೆ. ಕಿಲ್ಲರ್ ಕೊರೊನಾ ಸೋಂಕಿಗೆ ಮೂವರು ಮೃತಪಟ್ಟಿದ್ದು, ಈ ಮೂಲಕ ಸಾವಿನ ಸಂಖ್ಯೆ 38,216 ಕ್ಕೆ ಏರಿಕೆಯಾಗಿದೆ.ರಾಜ್ಯದಲ್ಲಿ ಇದುವರೆಗೆ 29,51,845 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ.0.34 ರಷ್ಟಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.