ಸೋಮವಾರ, 26 ಅಕ್ಟೋಬರ್ 2026
Trending

Ettinahole: ಎತ್ತಿನಹೊಳೆ ಯೋಜನೆಗೆ ಕೇಂದ್ರ ಸರ್ಕಾರ ಒಪ್ಪಿಗೆ – ಸ್ಥಗಿತಗೊಂಡ ಕಾರ್ಯ ಪುನರಾರಂಭ!!

Ettinahole : ರಾಜ್ಯದ ಮಹತ್ವಕಾಂಕ್ಷಿ ಯೋಜನೆಯದ ಎತ್ತಿನಹೊಳೆ ಯೋಜನೆಗೆ ಅರಣ್ಯದ ಜಾಗವನ್ನು ಬಳಸಿಕೊಳ್ಳಲು ಕೇಂದ್ರ ಸರ್ಕಾರವು ಷರತ್ತು ಬದ್ಧ ಅನುಮೋದನೆ ನೀಡಿದೆ.

Sponsored

ಎತ್ತಿನಹೊಳೆ ಯೋಜನೆಗೆ ಹಾಸನ ಹಾಗೂ ತುಮಕೂರು ಜಿಲ್ಲೆಗಳ 277 ಎಕರೆ ಅರಣ್ಯ ಬಳಸಲು ಕೇಂದ್ರ ಪರಿಸರ ಸಚಿವಾಲಯದ ಅರಣ್ಯ ಸಲಹಾ ಸಮಿತಿ ಷರತ್ತುಬದ್ಧ ಅನುಮತಿ ನೀಡಿದ ಬೆನ್ನಲ್ಲೇ ಕೇಂದ್ರ ಸರ್ಕಾರವು ತಾತ್ವಿಕ ಅನುಮೋದನೆ ನೀಡಿದೆ.

Advertisement
Advertisement

ಈ ಸಂಬಂಧ ಸಚಿವಾಲಯದ ಅರಣ್ಯ ಸಂರಕ್ಷಣಾ ವಿಭಾಗವು ಅರಣ್ಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅವರಿಗೆ ತಾತ್ವಿಕ ಅನುಮೋದನೆ ಪತ್ರವನ್ನು ಬುಧವಾರ ಕೊಟ್ಟಿದೆ. ಸಾಮಾನ್ಯ 28 ಹಾಗೂ ಆರು ವಿಶೇಷ ಷರತ್ತುಗಳನ್ನು ವಿಧಿಸಲಾಗಿದೆ. ಈ ಷರತ್ತುಗಳನ್ನು ಪಾಲಿಸಿದ ಬಳಿಕ ಅಂತಿಮ ಅನುಮೋದನೆ ನೀಡಲಾಗುವುದು ಎಂದು ಸಚಿವಾಲಯ ಸ್ಪಷ್ಟಪಡಿಸಿದೆ. ಈ ಬೆಳವಣಿಗೆ ಬಳಿಕ ಸಚಿವಾಲಯದ ತಕರಾರಿನ ಕಾರಣದಿಂದ ವರ್ಷದಿಂದ ಸ್ಥಗಿತಗೊಂಡಿದ್ದ ಎತ್ತಿನಹೊಳೆ ಯೋಜನೆ ಕಾಮಗಾರಿಗೆ ಮತ್ತೆ ಚಾಲನೆ ಸಿಗಲಿದೆ.

ಈಗಾಗಲೇ ಅರಣ್ಯ ಪ್ರದೇಶದಲ್ಲಿ ಒಪ್ಪಿಗೆ ಇಲ್ಲದೇ ಕಾಮಗಾರಿ ನಡೆಸಿದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳುಬೇಕು. ಕಾಮಗಾರಿ ನಡೆಸಿದ ಸ್ಥಳದ ಮೌಲ್ಯದ ಆರು ಪಟ್ಟು ಮೌಲ್ಯವನ್ನು ದಂಡದ ರೂಪದಲ್ಲಿ ಪಾವತಿಸಬೇಕು. ಪರಿಸರ ಸಂರಕ್ಷಣೆ ಗಮನದಲ್ಲಿಟ್ಟುಕೊಂಡು ಕಾಮಗಾರಿ ನಡೆಸಬೇಕು ಎಂದು ಕೇಂದ್ರ ಹೇಳಿದೆ.

Advertisement