ಸೋಮವಾರ, 26 ಅಕ್ಟೋಬರ್ 2026
Trending

Lockdown : ದೇಶದಲ್ಲಿ ಲಾಕ್‌ಡೌನ್ ಜಾರಿ ಬಗ್ಗೆ ಕೇಂದ್ರ ಸರ್ಕಾರ ಬಿಗ್ ಅಪ್ಡೇಟ್

Lockdown : ಮಧ್ಯಪ್ರಾಕ್ಷ ರಾಷ್ಟ್ರಗಳಲ್ಲಿ ಉಂಟಾಗಿರುವ ಯುದ್ಧದ ವಾತಾವರಣ ಭಾರತ ಸೇರಿದಂತೆ ಅನೇಕ ರಾಷ್ಟ್ರಗಳಲ್ಲಿ ದೊಡ್ಡ ಮಟ್ಟದ ಪ್ರಭಾವ ಬೀರಿದೆ. ಭಾರತದಲ್ಲಿ ಕೆಲವು ಅಗತ್ಯ ವಸ್ತುಗಳ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿ ಜನರು ಪರದಾಡುವಂತಹ ಪರಿಸ್ಥಿತಿ ಎದುರಾಗಿದೆ. ಈ ಬೆನ್ನಲ್ಲೇ ದೇಶಾದ್ಯಂತ ಲಾಕ್ ಡೌನ್ ಜಾರಿಯಾಗುತ್ತದೆ ಎಂದು ಕೆಲವು ವದಂತಿಗಳು ಹಬ್ಬಿದ್ದವು. ಇದೀಗ ಈ ಬಗ್ಗೆ ಕೇಂದ್ರ ಸರ್ಕಾರ ಸ್ಪಷ್ಟೀಕರಣ ನೀಡಿದೆ

Sponsored

ಕೆಲವು ದಿನಗಳ ಹಿಂದೆ ಪ್ರಧಾನಿ ಮೋದಿ ಅವರು ಸಂಸತ್ತಿನಲ್ಲಿ ಮಾತನಾಡುವಾಗ ಕೋವಿಡ್ ನಂತಹ ಪರಿಸ್ಥಿತಿಯನ್ನು ಎದುರಿಸಲು ಸಿದ್ದರಾಗಿ ಎಂದು ಹೇಳಿಕೆ ನೀಡಿದ್ದರು. ಹೀಗಾಗಿ ಭಾರತದಾತ್ಯಂತ ಲಾಕ್ಹೇ ಡೌನ್  ಹೇರಲಾಗುತ್ತದೆ ಎಂದು ಏನಾದರೂ ಭಾವಿಸಿದ್ದರು. ಆದರೆ ದೇಶಾದ್ಯಂತ ಮತ್ತೆ ಲಾಕ್‌ಡೌನ್ ಜಾರಿಯಾಗಲಿದೆ ಎಂಬ ವದಂತಿಗಳನ್ನು ಕೇಂದ್ರ ಸರ್ಕಾರ ತಳ್ಳಿಹಾಕಿದ್ದು, ಭಾರತದಲ್ಲಿ ಲಾಕ್‌ಡೌನ್ ಹೇರುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಸ್ಪಷ್ಟಪಡಿಸಿದ್ದಾರೆ.

Advertisement
Advertisement

ತಮ್ಮ ‘ಎಕ್ಸ್’ ಖಾತೆಯಲ್ಲಿ ಈ ಬಗ್ಗೆ ಮಾಹಿತಿ ಹಂಚಿಕೊಂಡ ಕೇಂದ್ರ ಸಚಿವರು, “ಜಾಗತಿಕ ಮಟ್ಟದಲ್ಲಿ ಇಂಧನ ಮತ್ತು ಪೂರೈಕೆ ಸರಪಳಿಯಲ್ಲಿ ಏರುಪೇರಾಗುತ್ತಿರುವುದನ್ನು ನಾವು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಇಂಧನ ಮತ್ತು ಅಗತ್ಯ ವಸ್ತುಗಳ ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಾಗದಂತೆ ನೋಡಿಕೊಳ್ಳಲು ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

Advertisement
div class="ere-sticky">