Home latest Rain Weather Report : ರಾಜ್ಯದ ಕೆಲವೆಡೆ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ? ಎಲ್ಲೆಲ್ಲಿ...

Rain Weather Report : ರಾಜ್ಯದ ಕೆಲವೆಡೆ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ? ಎಲ್ಲೆಲ್ಲಿ ಗೊತ್ತಾ?

Rain weather report of the state

Hindu neighbor gifts plot of land

Hindu neighbour gifts land to Muslim journalist

Rain weather report of the state : ರಾಜ್ಯದಲ್ಲಿ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಬಿಸಿಲನ ಶಾಖಕ್ಕೆ ಜನರು ತತ್ತರಿಸಿ ಹೋಗಿದ್ದಾರೆ. ಹೀಗಾಗಿ ಜನರು ಒಂದು ಮಳೆನಾದ್ರೂ ಬಂದಿದ್ದರೆ ಎಂದು ಆಕಾಶದತ್ತ ಮುಖ ಮಾಡುತ್ತಿದ್ದಾರೆ. ಬಿಸಿಲಿನ ಬೇಗೆ ಬೆಂದಿದ್ದ ಜನರಿಗೆ ಇಂದು ಮಳೆರಾಯ ತಂಪೆರಲಿದ್ದಾನೆ. ಹೌದು ಇಂದು ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ( Rain weather report of the state)  ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ಉಡುಪಿ, ಕೊಡಗು, ಉತ್ತರ ಒಳನಾಡಿನ ಗದಗ, ಬೆಳಗಾವಿ, ಬಾಗಲಕೋಟೆ, ಹಾವೇರಿ, ಧಾರವಾಡ, ಕಲಬುರಗಿ, ವಿಜಯಪುರ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಹಾಸನನ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ.

ಕಲಬುರಗಿಯಲ್ಲಿ 40.9 ಡಿಗ್ರಿ ಸೆಲ್ಸಿಯಸ್​ ಅತಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ 34.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 35.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 34.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಇನು ಮುಂದಿನ ದಿನಗಳಲ್ಲಿ ಮತ್ತಷ್ಟು ತಾಪಮಾನ ಹೆಚ್ಚಳವಾಗುವ ಸಾಧ್ಯತೆ ಇದೆ.

ಮುಂಬರುವ ಮಾನ್ಸೂನ್ ದೀರ್ಘಾವಧಿಯ ಸರಾಸರಿಯ 94 ಪ್ರತಿಶತದಷ್ಟು ಸಾಮಾನ್ಯಕ್ಕಿಂತ ಕಡಿಮೆ ಇರುತ್ತದೆ ಈ ಮೂಲಕ ದೇಶದಲ್ಲಿ ಶೇಕಡಾ 20ರಷ್ಟು ಬರಗಾಲ ಉಂಟಾಗುವ ಸಾಧ್ಯತೆ
ಹೇಳಲಾಗಿದೆ. ಪ್ರತಿ ವರ್ಷಕ್ಕಿಂತ ಹೆಚ್ಚು ಮಳೆಯಾಗಲು ಶೇಕಡಾ 110ರಷ್ಟು ಮಳೆ ಆಗಲೇಬೇಕು. ವಾಡಿಕೆಯಷ್ಟು ಮಳೆ ಬೀಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

 

ಇದನ್ನು ಓದಿ : Amazon Block Buster Value Days : ಸೇಲ್ ಇಂದು ಪ್ರಾರಂಭ! ಈ ವಸ್ತುಗಳ ಮೇಲೆ ಭಾರಿ ಸಿಗಲಿದೆ ಭಾರೀ ರಿಯಾಯಿತಿ!