Home latest Bantwala: ಬೈಕ್‌ ಸ್ಕಿಡ್‌; ನಾಟಕ ಕಲಾವಿದ ಸಾವು!!!

Bantwala: ಬೈಕ್‌ ಸ್ಕಿಡ್‌; ನಾಟಕ ಕಲಾವಿದ ಸಾವು!!!

Hindu neighbor gifts plot of land

Hindu neighbour gifts land to Muslim journalist

Bantwala: ನಾಟಕ ಕಲಾವಿದನೋರ್ವ ಬೈಕ್‌ ಸ್ಕಿಡ್‌ ಆಗಿ ಬಿದ್ದಿದ್ದು, ಸ್ಥಳದಲ್ಲೇ ಮೃತಪಟ್ಟ ಘಟನೆಯೊಂದು ನಡೆದಿದೆ. ಈ ಘಟನೆ ವಗ್ಗ ಸಮೀಪದ ಕೊಡ್ಯಮಲೆ ಎಂಬಲ್ಲಿ ನಡೆದಿದೆ.

ಬಂಟ್ವಾಳ ತಾಲೂಕಿನ ದೇವಶ್ಯಪಡೂರು ಗ್ರಾಮದ ಮುರಾಯಿದೊಟ್ಟು, ನೂಜೆ ದಿ.ಬೇಬಿ ಅವರ ಪುತ್ರ ಗೌತಮ್‌ (26) ಮೃತಪಟ್ಟವರು.

ಬೆಳುವಾಯಿಯಲ್ಲಿ ನಡೆದ ಕದಂಬ ನಾಟಕದಲ್ಲಿ ಭಾಗವಹಿಸಿ ಹಿಂತಿರುಗುವ ಸಂದರ್ಭದಲ್ಲಿ ಅಪಘಾತ ಸಂಭವಿಸಿದೆ ಎಂದು ಮಾಧ್ಯಮವೊಂದು ಪ್ರಕಟ ಮಾಡಿದೆ.

ಮೂಡುಬಿದಿರೆ ಪಿಂಗಾರ ಕಲಾವಿದೆರ್‌ ತಂಡದ ಕಲಾವಿದರಾಗಿದ್ದ ಇವರು ಡಿ.30 ರಂದು ಬೆಳುವಾಯಿಯಲ್ಲಿ ನಾಟಕ ಮುಗಿಸಿ ತಡರಾತ್ರಿ 3 ಗಂಟೆಯ ಸುಮಾರಿಗೆ ಮನೆಗೆ ಹಿಂತಿರುಗುತ್ತಿದ್ದ ಸಂದರ್ಭದಲ್ಲಿ ಸ್ಕೂಟರ್‌ ಮನೆಯ ಸಮೀಪ ಮರವೊಂದಕ್ಕೆ ಡಿಕ್ಕಿಯಾಗಿದೆ. ಈ ಸಂದರ್ಭ ಅವರ ತಲೆಗೆ ಏಟಾಗಿ ರಸ್ತೆಗೆ ಬಿದ್ದಿದ್ದಾರೆ ಎಂದು ವರದಿಯಾಗಿದೆ.

ಬೆಳಿಗ್ಗೆ ದಾರಿಯಲ್ಲಿ ಹೋಗುವವರು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಟ್ರಾಫಿ ಎಸ್‌.ಐ.ಸುತೇಶ್‌ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.