Home latest ಉದ್ಯಮಿಗೆ ವಂಚನೆ ಚೈತ್ರಾ ಕುಂದಾಪುರ ಪೊಲೀಸ್ ವಶಕ್ಕೆ

ಉದ್ಯಮಿಗೆ ವಂಚನೆ ಚೈತ್ರಾ ಕುಂದಾಪುರ ಪೊಲೀಸ್ ವಶಕ್ಕೆ

Hindu neighbor gifts plot of land

Hindu neighbour gifts land to Muslim journalist

 

ಉಡುಪಿ :ಇತ್ತೀಚೆಗೆ ನಡೆದ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ನಂಬಿಸಿ ಉದ್ಯಮಿಯೊಬ್ಬರಿಗೆ ಕೋಟ್ಯಾಂತರ ರೂ. ವಂಚಿಸಿದ ಆರೋಪಕ್ಕೆ ಸಂಬಂಧಿಸಿ ಹಿಂದೂ ಸಂಘಟನೆಯ ಕಾರ್ಯಕರ್ತೆ ಚೈತ್ರಾ ಕುಂದಾಪುರ ಮತ್ತು ಅವರ ಜತೆಗಾರರನ್ನು ಬೆಂಗಳೂರು ಸಿಸಿಬಿ ಪೊಲೀಸರು ಮಂಗಳವಾರ ರಾತ್ರಿ ಉಡುಪಿಯಲ್ಲಿ ವಶಕ್ಕೆ ಪಡೆದಿದ್ದಾರೆ.

ವಿಧಾನಸಭಾ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ನಂಬಿಸಿ ಹಣದ ವಿರುದ್ಧ ವಂಚಿಸಿರುವ ಚೈತ್ರಾ ಸಹಿತ 8 ಮಂದಿ ಬೈಂದೂರಿನ ಉದ್ಯಮಿ ಗೋವಿಂದ ಬಾಬು ಪೂಜಾರಿ ಬೆಂಗಳೂರು ನಗರದ ಬಂಡೇಪಾಳ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಅದರಂತೆ ಪೊಲೀಸರು ಚೈತ್ರ ಕುಂದಾಪುರ ಸಹಿತ ಸಂಗಡಿರನ್ನು ವಶಕ್ಕೆ ಪಡೆಯಲಾಗಿದೆ.