# ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ‘DECODE AI’ ಕಾರ್ಯಕ್ರಮ

- Link: https://hosakannada.com/latest/decode-ai-program-at-vani-pre-university-college/
- Published: 2026-11-02T09:01:23+00:00
- Author: ಹೊಸಕನ್ನಡ ನ್ಯೂಸ್

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜು, ಹಳೆಕೋಟೆ ಬೆಳ್ತಂಗಡಿಯ ಐಟಿ ಕ್ಲಬ್ ವತಿಯಿಂದ ವಿದ್ಯಾರ್ಥಿಗಳಲ್ಲಿ
ಕೃತಕ ಬುದ್ಧಿಮತ್ತೆ (Artificial Intelligence) ಕುರಿತ ಅರಿವು ಮೂಡಿಸುವ ಉದ್ದೇಶದಿಂದ ‘DECODE
AI – Unlock the Intelligence Within’ ಎಂಬ ವಿಶೇಷ ಕಾರ್ಯಕ್ರಮವನ್ನು ಕಾಲೇಜಿನ ಸಭಾಂಗಣದಲ್ಲಿ
ಆಯೋಜಿಸಲಾಯಿತು.

Sponsored

ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಯತಿಕಾರ್ಪ್ ಇಂಡಿಯಾ ಪ್ರೈವೇಟ್ ಲಿಮಿಟೆಡ್‌ನ ಸಿಇಒ
ಯತೀರಾಜ್ ಅವರು ಕೃತಕ ಬುದ್ಧಿಮತ್ತೆಯ ಬೆಳವಣಿಗೆ, ಅದರ ವಿವಿಧ ಅನ್ವಯಗಳು ಹಾಗೂ ಭವಿಷ್ಯದ ಅವಕಾಶಗಳ
ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವ
ಮೂಲಕ ಜ್ಞಾನ ಮತ್ತು ಕೌಶಲ್ಯಗಳನ್ನು ವೃದ್ಧಿಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡಿದರು.

Advertisement

Advertisement

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ವಿಷ್ಣು ಪ್ರಕಾಶ್ ಎಂ. ವಹಿಸಿದ್ದರು. ಆಡಳಿತ
ಅಧಿಕಾರಿ ಪ್ರಸಾದ್ ಕುಮಾರ್ ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಾದ ಡಿಯೋನ ಪರ್ಲ್ ಮತ್ತು ಚೈತನ್ಯ
ಕಾರ್ಯಕ್ರಮವನ್ನು ನಿರೂಪಿಸಿದರು. ಪೂರ್ಣೇಶ್ ಸ್ವಾಗತಿಸಿದರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ
ಐಟಿ ಕ್ಲಬ್ ಸಂಯೋಜಕಿ ದೀಕ್ಷಿತಾ ಅವರು ಬಹುಮಾನ ವಾಚನ ಮಾಡಿದರು. ಸಮಗ್ರ ಪ್ರಶಸ್ತಿಯನ್ನು ಗಣಕ ವಿಜ್ಞಾನ
ವಿಭಾಗದ ಮುಖ್ಯಸ್ಥರಾದ ಸುಧೀರ್ ಕೆ. ಎನ್. ಘೋಷಿಸಿದರು.

ವಿದ್ಯಾರ್ಥಿಗಳಲ್ಲಿ ತಂತ್ರಜ್ಞಾನ ಜ್ಞಾನ, ಸೃಜನಶೀಲತೆ ಹಾಗೂ ನವೀನ ಆಲೋಚನೆಗಳನ್ನು ಬೆಳೆಸುವುದರೊಂದಿಗೆ
ಕೃತಕ ಬುದ್ಧಿಮತ್ತೆಯ ಸಾಧ್ಯತೆಗಳನ್ನು ಅರಿತುಕೊಳ್ಳಲು ಈ ಕಾರ್ಯಕ್ರಮ ವೇದಿಕೆಯಾಯಿತು.

Advertisement
