ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು
ಬೆಂಗಳೂರು: ಕರ್ನಾಟಕದ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರು ಉಂಟಾಗಿದ್ದು, ಅವರನ್ನು ಬೆಂಗಳೂರಿನ ವೈದೇಹಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅವರ ಆರೋಗ್ಯದಲ್ಲಿ ವ್ಯತ್ಯಯ ಉಂಟಾದ ಹಿನ್ನೆಲೆಯಲ್ಲಿ ತುರ್ತು ನಿಘಾ ಘಟಕದಲ್ಲಿ ಇರಿಸಿ ವೈದ್ಯರು ಸೂಕ್ತ ಚಿಕಿತ್ಸೆ ನೀಡುತ್ತಿದ್ದಾರೆ.
Sponsoredವಸಂತನಗರದ ಬ್ಯಾಡ್ಮಿಂಟನ್ ಅಸೋಸಿಯೇಷನ್‌ನಲ್ಲಿ ಆಯೋಜಿಸಲಾಗಿದ್ದ ಇಂಡಿಯಾ ಇಂಟರ್‌ನ್ಯಾಷನಲ್ ಚಾಲೆಂಜ್ ಉದ್ಘಾಟನಾ ಸಮಾರಂಭದಲ್ಲಿ ಪರಮೇಶ್ವರ್ ಭಾಗಿಯಾಗಿದ್ದರು. ಈ ವೇಳೆ ಆರೋಗ್ಯದಲ್ಲಿ ಏರುಪೇರಾಗಿದೆ. ಡಿಸಿಎಂ ಗೆ ಹೃದಯಕ್ಕೆ ಸಂಬಂಧಿಸಿದಂತೆ ಸಮಸ್ಯೆ ಆಗಿದೆ ಎನ್ನಲಾಗಿದ್ದು, ವೈದ್ಯರು ಪರೀಕ್ಷೆ ಮಾಡುತ್ತಿದ್ದಾರೆ.
ಡಿಸಿಎಂ ಡಾ.ಜಿ.ಪರಮೇಶ್ವರ್ ಆರೋಗ್ಯವಾಗಿದ್ದಾರೆ ಎಂದು ಆಸ್ಪತ್ರೆಗೆ ಭೇಟಿ ನೀಡಿದ ಯು ಟಿ ಖಾದರ್ ಮಾಹಿತಿ ನೀಡಿದ್ದಾರೆ.




