# ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

- Link: https://hosakannada.com/latest/deputy-chief-minister-dr-g-parameshwaras-health-fluctuates-admitted-to-hospital/
- Published: 2026-10-27T09:02:13+00:00
- Author: ಹೊಸಕನ್ನಡ ನ್ಯೂಸ್

​ಬೆಂಗಳೂರು: ಕರ್ನಾಟಕದ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರ ಆರೋಗ್ಯದಲ್ಲಿ ದಿಢೀರ್‌ ಏರುಪೇರು
ಉಂಟಾಗಿದ್ದು, ಅವರನ್ನು ಬೆಂಗಳೂರಿನ ವೈದೇಹಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ.
​
ಅವರ ಆರೋಗ್ಯದಲ್ಲಿ ವ್ಯತ್ಯಯ ಉಂಟಾದ ಹಿನ್ನೆಲೆಯಲ್ಲಿ ತುರ್ತು ನಿಘಾ ಘಟಕದಲ್ಲಿ ಇರಿಸಿ ವೈದ್ಯರು ಸೂಕ್ತ
ಚಿಕಿತ್ಸೆ ನೀಡುತ್ತಿದ್ದಾರೆ.

Sponsored

ವಸಂತನಗರದ ಬ್ಯಾಡ್ಮಿಂಟನ್ ಅಸೋಸಿಯೇಷನ್‌ನಲ್ಲಿ ಆಯೋಜಿಸಲಾಗಿದ್ದ ಇಂಡಿಯಾ ಇಂಟರ್‌ನ್ಯಾಷನಲ್‌ ಚಾಲೆಂಜ್‌
ಉದ್ಘಾಟನಾ ಸಮಾರಂಭದಲ್ಲಿ ಪರಮೇಶ್ವರ್‌ ಭಾಗಿಯಾಗಿದ್ದರು. ಈ ವೇಳೆ ಆರೋಗ್ಯದಲ್ಲಿ ಏರುಪೇರಾಗಿದೆ. ಡಿಸಿಎಂ
ಗೆ ಹೃದಯಕ್ಕೆ ಸಂಬಂಧಿಸಿದಂತೆ ಸಮಸ್ಯೆ ಆಗಿದೆ ಎನ್ನಲಾಗಿದ್ದು, ವೈದ್ಯರು ಪರೀಕ್ಷೆ ಮಾಡುತ್ತಿದ್ದಾರೆ.

Advertisement

Advertisement

ಡಿಸಿಎಂ ಡಾ.ಜಿ.ಪರಮೇಶ್ವರ್‌ ಆರೋಗ್ಯವಾಗಿದ್ದಾರೆ ಎಂದು ಆಸ್ಪತ್ರೆಗೆ ಭೇಟಿ ನೀಡಿದ ಯು ಟಿ ಖಾದರ್‌
ಮಾಹಿತಿ ನೀಡಿದ್ದಾರೆ.

Advertisement
