Home latest ಬಜರಂಗದಳದ ಮಾಜಿ ಜಿಲ್ಲಾ ಸಂಚಾಲಕನ ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು

ಬಜರಂಗದಳದ ಮಾಜಿ ಜಿಲ್ಲಾ ಸಂಚಾಲಕನ ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು

Hindu neighbor gifts plot of land

Hindu neighbour gifts land to Muslim journalist

ರಾಜಸ್ಥಾನ : ರಾಜಸ್ಥಾನದ ಉದಯಪುರದಲ್ಲಿ ಸೋಮವಾರ ಸಂಜೆ ಬಜರಂಗದಳದ ಮಾಜಿ ಜಿಲ್ಲಾ ಸಂಚಾಲಕ ರಾಜು ರಾಜೇಂದ್ರ ಎಂಬವರನ್ನು ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದಾರೆ ಎಂಬ ಮಾಹಿತಿ ವರದಿಯಾಗಿದೆ.

ಈ ಘಟನೆಯು ಸೋಮವಾರ ರಾತ್ರಿ ಉದಯಪುರದ ಅಂಬಾಮಠ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹತ್ಯೆಗೀಡಾದ ಜೈಪುರ ಬಜರಂಗದಳದ ಮಾಜಿ ಜಿಲ್ಲಾ ಸಂಚಾಲಕರಾಗಿರುವ ರಾಜು ರಾಜೇಂದ್ರ ಪರ್ಮಾರ್ (38 ವರ್ಷ) ಭೂ ವ್ಯವಹಾರದಲ್ಲಿ ತೊಡಗಿಸಿಕೊಂಡಿದ್ದರು.

ರಾಜು ರಾಜೇಂದ್ರ ಪರ್ಮಾರ್ ಅವರನ್ನು ಸಮೀಪದ ಬಾರ್‌ಗೆ ಕರೆಸಿಕೊಂಡಿದ್ದು, ಹತ್ತಿರದಿಂದಲೇ ತಲೆಗೆ ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ. ತಕ್ಷಣವೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದರೂ, ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ಪರಿಶೀಲಿಸಿದ್ದು,ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು ಯುವಕರು ಓಡುತ್ತಿರುವ ದೃಶ್ಯ ಕಂಡು ಬಂದಿದ್ದು ,ಅವರೇ ರಾಜು ರಾಜೇಂದ್ರ ಪರ್ಮಾರ್ ಮೇಲೆ ಗುಂಡು ಹಾರಿಸಿರುವ ಶಂಕೆ ವ್ಯಕ್ತವಾಗಿದೆ.

ಘಟನೆ ಸಂದರ್ಭದಲ್ಲಿ ಸಮೀಪದಲ್ಲಿ ಮದುವೆ ಮೆರವಣಿಗೆ ಸಾಗುತ್ತಿದ್ದರಿಂದ ಜನರಿಗೆ ಗುಂಡಿನ ಸದ್ದು ಕೇಳಿಸಲಿಲ್ಲ. ಮೆರವಣಿಗೆ ಮುಗಿದ ಬಳಿಕ ರಾಜೇಂದ್ರ ಪರ್ಮಾರ್ ರಸ್ತೆಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದನ್ನು ಕಂಡ ಜನರು ಕೂಡಲೆ ಆಸ್ಪತ್ರೆಗೆ ದಾಖಲಿಸಲಾಗಿದೆ.ಆ ವೇಳೆಗಾಗಲೇ ರಾಜೇಂದ್ರ ಪರ್ಮಾರ್ ಮೃತಪಟ್ಟಿದ್ದರು.

ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.